ಚೆಯ್ಯಂಡಾಣೆ, ಮೇ ೧೮: ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷರಾದ ರತ್ನಾ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮೀನಾ ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮಕ್ಕಳನ್ನು ಆರತಿ ಬೆಳಗುವುದರೊಂದಿಗೆ ಶಾಲಾ ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಬರ ಮಾಡಿಕೊಂಡರು.ಚೇಲಾವರ ಪೊನ್ನೋಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.
ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷೆ ರಮ್ಯ ಉದ್ಘಾಟಿಸಿದರು. ಅತಿಥಿ ಶಿಕ್ಷಕಿ ದೀಪಿಕಾ ಹಾಗೂ ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರು ಮಕ್ಕಳನ್ನು ಬರಮಾಡಿಕೊಂಡರು. ನಂತರ ಸಿಹಿ ಹಂಚಲಾಯಿತು.ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭ ಶಾಲೆಯ ಉಪಾಧ್ಯಕ್ಷ ಕೆ.ಎ. ಹ್ಯಾರೀಸ್, ನೂರಂಬಡ ಉದಯ ಶಂಕರ್, ಬಿದ್ದಾಟಂಡ ಜಿನ್ನು ನಾಣಯ್ಯ, ಪ್ರಾಂಶುಪಾಲೆ ಅವನಿಜ ಸೋಮಯ್ಯ. ಉಪಪ್ರಾಂಶುಪಾಲೆ ಸೌಭಾಗ್ಯ, ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಇದ್ದರು.ಕೂಡಿಗೆ ಅಂಜೆಲಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹೂ ಮತ್ತು ಸಿಹಿ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ವಿಜಯ್ ಸೇರಿದಂತೆ ಸಹ ಶಿಕ್ಷಕರು ಹಾಜರಿದ್ದರು.
ಐಗೂರು ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಸಿಹಿ ಹಾಗೂ ಹೂಗಳನ್ನು ನೀಡಿ ಸ್ವಾಗತಿಸುವ ಮೂಲಕ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.
ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಪಂಚಾಯಿತಿ ಸದಸ್ಯರಾದ ಪ್ರಮೋದ್, ವಿನು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್ ಹಾಗೂ ಸಹ ಶಿಕ್ಷಕರು, ಪೋಷಕರು ಇದ್ದರು.