ಮಡಿಕೇರಿ, ಮೇ ೨೧: ಆರ್ಯಭಟ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕೊಡಲ್ಪಡುವ ಪ್ರಸಕ್ತ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟಿçÃಯ ಪ್ರಶಸ್ತಿಗೆ ಮಡಿಕೇರಿಯ ಆರ್.ಕೆ. ಬಾಲಚಂದ್ರ ಭಾಜನರಾಗಿದ್ದಾರೆ. ಯುವ ಸಬಲೀಕರಣ ಕ್ಷೇತ್ರದಲ್ಲಿ ತರಬೇತಿಯ ಮೂಲಕ ನೀಡಿದ ಅತ್ಯುತ್ತಮ ಕೊಡುಗೆ ಮತ್ತು ಗ್ರಾಮೀಣ ಭಾಗದಲ್ಲಿ ಇವರು ನೀಡಿದ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿಯನ್ನು ತಾ. ೨೫ ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಡಾ. ಎಚ್.ಎಲ್.ಎನ್.ರಾವ್ ತಿಳಿಸಿದ್ದಾರೆ.