ಸೋಮವಾರಪೇಟೆ, ಮೇ ೨೧: ಉತ್ತಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಅಮೂಲ್ಯವಾಗಿದ್ದು, ಇದು ಮಲೀನವಾಗದಂತೆ ಕಾಪಾಡಿಕೊಳ್ಳುವ ಜವಾಬ್ದಾರಿ ಮಾಧ್ಯಮ ಕ್ಷೇತ್ರದ ಮೇಲಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದರು.ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ, ಪದಗ್ರಹಣ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ಸಮಾಜಮುಖಿ ಸಂದೇಶಗಳನ್ನು ಜನರಿಗೆ ತಲುಪಿಸುವ ಮೂಲಕ ವೃತ್ತಿಗೌರವವನ್ನು ಕಾಪಾಡಿಕೊಳ್ಳಬೇಕು. ವ್ಯಕ್ತಿಯ
ತೇಜೋವಧೆಯ ಬದಲು ಸಮಾಜವನ್ನು ತಿದ್ದುವ ಬರಹಗಳು ಮುದ್ರಿತವಾಗಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೋದ್ಯಮ ತನ್ನ ಸ್ವಂತಿಕೆಯನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ.ವಿಜಯ ಮಾತನಾಡಿ, ಬಹಳಷ್ಟು ಪತ್ರಕರ್ತರಿಂದು ಸಂಕಷ್ಟದ ಬದುಕನ್ನು ಸಾಗಿಸುತ್ತಿದ್ದು, ಪತ್ರಕರ್ತರ ಶ್ರೇಯೋಭಿವೃದ್ಧಿಯ ನಿಟ್ಟಿನಲ್ಲಿ ಸರಕಾರದಿಂದ ಸವಲತ್ತುಗಳನ್ನು ಪತ್ರಕರ್ತರಿಗೆ ತಲುಪಿಸುವಲ್ಲಿ ಜನಪ್ರತಿನಿಧಿಗಳು ಗಮನ ಹರಿಸುವಂತಾಗಬೇಕೆAದು ಮನದಿಂಗಿತ ವ್ಯಕ್ತಪಡಿಸಿದರು.
ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ.ಲೋಕೇಶ್ ಮಾತನಾಡಿ, ರಾಜಕಾರಣಿಗಳು ಎಡವಿದಾಗ ಅವರನ್ನು ಎಚ್ಚರಿಸುವಂತಹ ಕೆಲಸವನ್ನು ಪತ್ರಕರ್ತರು ಮಾಡಬೇಕು. ಸರ್ಕಾರಗಳು ಪತ್ರಕರ್ತರ ಶ್ರೇಯೋಭಿವೃದ್ದಿಗೆ ಯೋಜನೆ ರೂಪಿಸಬೇಕು. ಪತ್ರಕರ್ತರಿಗೆ ಸಾಮಾಜಿಕ ಭದ್ರತೆಯೊಂದಿಗೆ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಅಭಿಪ್ರಾಯಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಅವರು ನೂತನ ತಾಲೂಕು ಸಂಘದ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರಲ್ಲದೆ, ತಾಲೂಕು ಸಂಘದ ಎಲ್ಲಾ ಕಾರ್ಯಕ್ರಮಗಳಿಗೆ ಜಿಲ್ಲಾ ಸಂಘದಿAದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಸಮಾರAಭದ ಅಧ್ಯಕ್ಷತೆಯನ್ನು ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಪತ್ರಕರ್ತರ ಸಂಘದ ನಿರ್ದೇಶಕ ಮಂಜುನಾಥ್, ರಾಷ್ಟಿçÃಯ ಸಮಿತಿ ಸದಸ್ಯ ಸುನೀಲ್ ಪೊನ್ನೆಟ್ಟಿ ಉಪಸ್ಥಿತರಿದ್ದರು.