ಬಿ.ಬಿ.ಎಂ.ಪಿ. ಚುನಾವಣೆ ಪ್ರಕ್ರಿಯೆ ಆರಂಭಿಸಲು ಕೋರ್ಟ್ ಸೂಚನೆ

ಬೆಂಗಳೂರು, ಮೇ ೨೦: ಮುಂದಿನ ಎಂಟು ದಿನಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ೮ ವಾರಗಳಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸುವAತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಸುಪ್ರೀಂ ಆದೇಶ ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸುಪ್ರೀಂ ಕೋರ್ಟ್ ಎಂಟು ವಾರದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಿಸುವAತೆ ಸೂಚಿಸಿದೆ. ಈ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಎಲೆಕ್ಷನ್‌ಗೆ ಸಂಬAಧಿಸಿದ ಡಿ ಲಿಮಿಟೇಷನ್ ಪ್ರಕ್ರಿಯೆ ಅಂತಿಮ ಅಂತದಲ್ಲಿದೆ. ಶೀಘ್ರದಲ್ಲೇ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ ಎಂದು ತಿಳಿಸಿದರು. ಬಿಬಿಎಂಪಿ ಚುನಾವಣೆ ಸಂಬAಧ ಸಮಿತಿ ಕೂಡ ಮಾಡಿದ್ದೇವೆ. ಆದಷ್ಟು ಬೇಗ ಚುನಾವಣೆಯನ್ನ ಮಾಡ್ತೀವಿ. ಹಿಂದಿನ ಆದೇಶದಲ್ಲಿ ಮೀಸಲಾತಿ ಇಲ್ಲ ಅಂತ ತೀರ್ಪು ನೀಡಿತ್ತು. ನಂತರ ಒಬಿಸಿ ಮೀಸಲಾತಿ ಸಹಿತ ಚುನಾವಣೆ ಮಾಡಲು ಸೂಚನೆ ನೀಡಿದೆ. ನಾವು ಕೂಡ ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಲ್ಲ ಅಂತ ಹೇಳಿದ್ದೆವು. ಈಗ ನಮ್ಮ ಮನ್ನಣೆಯಂತೆ ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ದೊರೆತಿದೆ ಎಂದು ಹೇಳಿದರು. ಮತ್ತೆ ಕಾಲಾವಕಾಶ ಕೇಳ್ತೀರಾ ಅನ್ನೋ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋರ್ಟ್ ತೀರ್ಪುನ್ನು ಪಾಲಿಸಬೇಕು. ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ೧೯೮ ವಾರ್ಡ್ಗಳನ್ನು ಹೊಂದಿರುವ ಬಿಬಿಎಂಪಿಯ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದ್ದರಿAದ ಚುನಾವಣೆ ವಿಳಂಬವಾಗಿತ್ತು. ಈ ನಡುವೆ ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ (೨೦೨೦) ಅನುಸಾರ ೨೪೩ ವಾರ್ಡ್ಗಳಿಗೆ ಬದಲಾಗಿ ೨೦೨೦ರ ಸೆ. ೨೩ ರಂದು ಹೊರಡಿಸಿರುವ ಅಧಿಸೂಚನೆಯಂತೆ ೧೯೮ ವಾರ್ಡ್ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ೨೦೨೦ರ ಡಿಸೆಂಬರ್ ೪ ರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ನಂತರ ರಾಜ್ಯ ವಿಧಾನಸಭೆಯು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ೨೪೩ ವಾರ್ಡ್ಗಳಿಗೆ ಚುನಾವಣೆ ನಡೆಸಬೇಕು ಎಂಬ ನಿರ್ಣಯ ಅಂಗೀಕರಿಸಿತ್ತು. ಅಲ್ಲದೇ ಹೈಕೋರ್ಟ್ ಆದೇಶದ ವಿರುದ್ಧ ಕೋರ್ಟ್ಗೆ ಮೇಲ್ಮನವಿಯನ್ನು ಸರ್ಕಾರ ಸಲ್ಲಿಸಿತ್ತು.

ಅತ್ಯಾಚಾರಿಗಳ ಎನ್‌ಕೌಂಟರ್ ಉದ್ದೇಶಪೂರ್ವಕ

ನವದೆಹಲಿ, ಮೇ ೨೦: ತೆಲಂಗಾಣದ ಹೈದರಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್ ಹೆಸರಿನಲ್ಲಿ ಉದ್ದೇಶಪೂರ್ವಕವಾಗಿ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ತನ್ನ ವರದಿಯಲ್ಲಿ ಹೇಳಿದೆ. ನ್ಯಾಯಮೂರ್ತಿ ವಿ.ಎಸ್. ಸಿರ್ಪುರ್ಕರ್ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ್ದ ಸಮಿತಿ ಪ್ರಕರಣದ ತನಿಖೆಯಲ್ಲಿ ಸ್ಪಷ್ಟ ಲೋಪವನ್ನು ಎತ್ತಿ ತೋರಿಸಿದೆ ಮತ್ತು ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ ೧೦ ಪೊಲೀಸರನ್ನು ಕೊಲೆ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಲು ಶಿಫಾರಸು ಮಾಡಿದೆ. ಜೊತೆಗೆ ಹತ್ಯೆಯಾದ ನಾಲ್ವರಲ್ಲಿ ಮೂವರು ಅಪ್ರಾಪ್ತ ವಯಸ್ಕರಾಗಿದ್ದರು ಎಂದು ವರದಿ ಹೇಳಿದೆ. ಪ್ರಕರಣದಲ್ಲಿ ಜೋಲು ಶಿವ, ಜೋಲು ನವೀನ್ ಮತ್ತು ಚಿಂತಕುAಟಾ ಚೆನ್ನಕೇಶವುಲು ಅವರು ಅಪ್ರಾಪ್ತರಾಗಿದ್ದರು ಎಂದು ಸಮಿತಿ ತಿಳಿಸಿದೆ. ೨೦೧೯ರ ನವೆಂಬರ್‌ನಲ್ಲಿ ಪಶು ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೆ ಸಂಬAಧಿಸಿದAತೆ ನಾಲ್ವರು ಆರೋಪಿಗಳಾದ ಮೊಹಮ್ಮದ್ ಆರಿಫ್, ಚಿಂತಕುAಟಾ ಚೆನ್ನಕೇಶವುಲು, ಜೋಲು ಶಿವ ಮತ್ತು ಜೊಲ್ಲು ನವೀನ್ ಅವರನ್ನು ಬಂಧಿಸಲಾಗಿತ್ತು. ಸ್ಥಳ ಪರಿಶೀಲನೆ ವೇಳೆ ನಾಲ್ವರು ಆರೋಪಿಗಳನ್ನು ಹೈದರಾಬಾದ್ ಬಳಿ ಎನ್‌ಕೌಂಟರ್ ಮಾಡಲಾಗಿತ್ತು. ಇದೇ ಹೆದ್ದಾರಿಯಲ್ಲಿ ಆರೋಪಿಗಳು ೨೭ ವರ್ಷದ ಪಶುವೈದ್ಯೆಯನ್ನು ಸುಟ್ಟು ಹಾಕಿದ್ದರು. ಹೈದರಾಬಾದ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್‌ಕೌಂಟರ್ ಹತ್ಯೆಗೆ ಸಂಬAಧಿಸಿದAತೆ ಮೂವರು ಸದಸ್ಯರ ತನಿಖಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಇಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದು, ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ತೆಲಂಗಾಣ ಹೈಕೋರ್ಟ್ಗೆ ವರ್ಗಾಯಿಸಿದೆ. ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್‌ಕೌಂಟರ್ ಕುರಿತು ಅಂತಿಮ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ವಿಎಸ್ ಸಿರ್ಪುರ್ಕರ್ ನೇತೃತ್ವದ ಆಯೋಗಕ್ಕೆ ಕಳೆದ ವರ್ಷ ಆಗಸ್ಟ್ ೩ ರಂದು ಸುಪ್ರೀಂ ಕೋರ್ಟ್ ಆರು ತಿಂಗಳ ಕಾಲಾವಕಾಶ ನೀಡಿತ್ತು.

ಜ್ಞಾನವಾಪಿ ಮಸೀದಿ ವಿವಾದ : ಪ್ರಕರಣ ವರ್ಗಾವಣೆ

ನವದೆಹಲಿ, ಮೇ ೨೦: ಜ್ಞಾನವಾಪಿ ಮಸೀದಿ ವಿವಾದದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಾರಣಾಸಿ ಸಿವಿಲ್ ಕೋರ್ಟ್ನಿಂದ ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಿದೆ. ಪ್ರಕರಣದಲ್ಲಿನ ಸಂಕೀರ್ಣತೆಯನ್ನು ಮನಗಂಡು ಸರ್ವೋಚ್ಛ ನ್ಯಾಯಾಲಯ ಅನುಭವಿ ನ್ಯಾಯಾಧೀಶರಿಗೆ ವರ್ಗಾವಣೆ ಮಾಡುತ್ತಿರುವುದಾಗಿ ಹೇಳಿದೆ. ಉತ್ತರ ಪ್ರದೇಶ ಉನ್ನತ ನ್ಯಾಯಾಂಗ ಸೇವೆ ಹಿರಿಯ ಹಾಗೂ ಅನುಭವಿ ನ್ಯಾಯಾಂಗದ ಅಧಿಕಾರಿ ಪ್ರಕರಣವನ್ನು ಪರಿಶೀಲಿಸಲಿದ್ದಾರೆ. ನ್ಯಾ. ಡಿ.ವೈ. ಚಂದ್ರಚೂಡ್, ನ್ಯಾ. ಸೂರ್ಯಕಾಂತ್ ಹಾಗೂ ಪಿ.ಎಸ್. ನರಸಿಂಹ ಅವರು ಈ ಆದೇಶ ನೀಡಿದ್ದು ಮಸೀದಿಯ ಸಮಿತಿ ಅರ್ಜಿಯ ವಿಚಾರಣೆ ನಡೆಯುವವರೆಗೆ ತಾ. ೧೭ ರಂದು ನೀಡಿದ್ದ ಮಧ್ಯಂತರ ಆದೇಶವೇ ಮುಂದುವರೆಯಲಿದೆ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಕೆನಡಾ ಸಂಸತ್ತಿನಲ್ಲಿ ಕನ್ನಡ

ಕೆನಡಾ, ಮೇ ೨೦: ನಮ್ಮ ಕನ್ನಡ ಕಂಪು ದೇಶಗಳಲ್ಲದೇ ವಿದೇಶಗಳಲೆಲ್ಲಾ ಪಸರಿಸುತ್ತಿದೆ. ಅಲ್ಲಿರುವ ಕನ್ನಡಿಗರು ಕನ್ನಡದಲ್ಲೇ ಮಾತನಾಡಿ ಕನ್ನಡದ ಹಿರಿಮೆ, ಗರಿಮೆಯನ್ನು ಸಾರುತ್ತಿದ್ದಾರೆ. ಈಗ ಈ ಸಾಲಿಗೆ ಕೆನಡಾದ ಸಂಸದ ಕನ್ನಡಿಗ ಚಂದ್ರ ಆರ್ಯ ಸೇರ್ಪಡೆಗೊಂಡಿದ್ದಾರೆ. ಚಂದ್ರ ಆರ್ಯ ಅವರು ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಕನ್ನಡಾಭಿಮಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಸಭಾಪತಿ ಹಾಗೂ ಅಲ್ಲಿ ನೆರೆದಿದ್ದವರ ಎದುರು ಮಾನ್ಯ ಸಭಾಪತಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ, ಕರ್ನಾಟಕ ರಾಜ್ಯದ, ತುಮಕೂರು ಜಿಲ್ಲೆಯ, ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ೫ ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದಿದ್ದಾರೆ.

ಹುಸಿ ಬಾಂಬ್ ಬೆದರಿಕೆ - ಆರೋಪಿ ಬಂಧನ

ಬೆAಗಳೂರು, ಮೇ ೨೦: ಶುಕ್ರವಾರ ಬೆಳಗಿನ ಜಾವ ೩ ಗಂಟೆ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಕೆಂಪೇಗೌಡ ಅಂರ‍್ರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದ ದುಷ್ಕರ್ಮಿಯನ್ನು ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಶಾಂತಿನಗರ ನಿವಾಸಿ ಸುಭಾಷ್ ಗುಪ್ತಾ ಎಂದು ಗುರುತಿಸಲಾಗಿದೆ. ವಿಚ್ಛೇದಿತ ಅಕ್ಕನ ಗಂಡನ ವಿರುದ್ಧ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ ಸುಭಾಷ್, ಅದಕ್ಕಾಗಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ದೂರವಾಣಿ ಕರೆ ಬರುತ್ತಿದ್ದಂತೆಯೇ ನಿಯಂತ್ರಣ ಕೊಠಡಿಯಲ್ಲಿದ್ದ ಡಿಸ್‌ಪ್ಲೇನಲ್ಲಿ ವ್ಯಕ್ತಿಯ ಸಂಪರ್ಕದ ಮಾಹಿತಿಗಳು ಬಹಿರಂಗಗೊAಡಿತ್ತು. ಕೂಡಲೇ ಅಧಿಕಾರಿಗಳು ಸಂಬAಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿಗಳನ್ನು ರವಾನಿಸಿದ್ದರು. ಇದರಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ತನ್ನ ಭಾವನ ದೂರವಾಣಿ ಸಂಖ್ಯೆಯಿAದಲೇ ಕರೆ ಮಾಡಿದ್ದನೇ ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆಂದು ತಿಳಿದುಬಂದಿದೆ.