ಸಿದ್ದಾಪುರ, ಮೇ ೨೦: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಡೆಂಗ್ಯೂ ದಿನಾಚರಣೆಯು ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಸಿದ್ದಾಪುರ ಸೆಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳು ಡೆಂಗ್ಯೂ ರೋಗದ ಕುರಿತಾದ ಎಚ್ಚರಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಫಲಕದೊಂದಿಗೆ ಮೆರವಣಿಗೆಯ ಮೂಲಕ ಮುಖ್ಯ ಬೀದಿಗಳಲ್ಲಿ ತೆರಳಿ, ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾರ್ಯಕ್ರಮವನ್ನು ಅರ್ಥ ಪೂರ್ಣಗೊಳಿಸಿದರು.
ಈ ಸಂದರ್ಭದಲ್ಲಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವೈದÀ್ಯ ಡಾ. ರಾಘವೇಂದ್ರ, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ತುಳಸಿ ಗಣಪತಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ ಮಾತನಾಡಿದರು.
ಈ ಸಂದÀರ್ಭದಲ್ಲಿ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಸೆಂಟ್ ಆನ್ಸ್ ಶಾಲೆಯ ಅಧ್ಯಾಪಕರು ಹಾಜರಿದ್ದರು.