ಮಡಿಕೇರಿ, ಮೇ ೨೧: ಪ್ರಸಕ್ತ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ೫ನೇ ತರಗತಿಯಲ್ಲಿ ಶೇ. ೬೦ ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ ಎಜುಕೇಷನಲ್ ಇನ್ಸಿ÷್ಟಟ್ಯುಶನ್ಸ್, ಪ್ರಶಾಂತಿ ನಿಲಯ ಪೊನ್ನಂಪೇಟೆ, ದಕ್ಷಿಣ ಕೊಡಗು ಮತ್ತು ಸೆಂಟ್ ಜೋಸೆಫ್ಸ್ ಗರ್ಲ್ಸ್ ಕಾಂಪೋಸಿಟ್ ಹೈಸ್ಕೂಲ್, ಮಡಿಕೇರಿ ಇಲ್ಲಿ ೬ನೇ ತರಗತಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸಬೇಕು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. ೨ ಲಕ್ಷ ಒಳಗೆ ಇರಬೇಕು (ಈ ಬಗ್ಗೆ ತಹಶೀಲ್ದಾರರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.) ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-೦೮೨೭೨-೨೦೦೫೦೦, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಪೊನ್ನಂಪೇಟೆ-೦೮೨೭೪-೨೬೧೨೬೧, ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-೦೮೨೭೨-೨೨೩೫೫೨ ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-೦೮೨೭೬-೨೮೧೧೧೫ ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೆಗೌಡ ಅವರು ತಿಳಿಸಿದ್ದಾರೆ.