ಮಡಿಕೇರಿ, ಮೇ ೨೦: ನಗರಸಭೆಯು ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಿರಂತರವಾಗಿ ಅಂಗಡಿ ಮಳಿಗೆಗಳ ಮೇಲೆ ದಾಳಿ ಮಾಡಲಾಗುತ್ತದೆ. ಈಗಾಗಲೇ ೧ ತಿಂಗಳಿನಿAದ ಸಾಕಷ್ಟು ದಾಳಿ ನಡೆಸಿದ್ದು, ಅಂದಾಜು ೩೦೦ ಕೆಜಿಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, ೨೨ ಸಾವಿರ ರೂ ದಂಡ ವಿಧಿಸಲಾಗಿದೆ ಎಂದು ಪೌರಾಯುಕ್ತ ಎಸ್.ವಿ.ರಾಮದಾಸ್ ಅವರು ತಿಳಿಸಿದ್ದಾರೆ. ನಗರಸಭೆ ಅಧಿಕಾರಿಗಳಿಗೆ ಸಹಕರಿಸದೆ ಗಲಾಟೆ ನಡೆಸಿದ ಅಂಗಡಿಯ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ ಅಂಗಡಿಯನ್ನು ಮುಚ್ಚಿಸಲಾಗಿದೆ ಮತ್ತು ಎಚ್ಚರಿಕೆ ನೀಡಿ ಕೈಬಿಡಲಾಗಿದೆ.

ಪ್ಲಾಸ್ಟಿಕ್ ವೇಸ್ಟ್ ನಿರ್ವಹಣೆ ನಿಯಮ ೨೦೧೬ ಹಾಗೂ ನಂತರದ ತಿದ್ದುಪಡಿಯಂತೆ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳಾದ ಕ್ಯಾರಿ ಬ್ಯಾಗ್‌ಗಳು, ಪ್ಲಾಸ್ಟಿಕ್ ಶೀಟ್‌ಗಳು, ಪ್ಲಾಸ್ಟಿಕ್ ಕವರ್‌ಗಳು, ಪ್ಲಾಸ್ಟಿಕ್ ಚಮಚ, ಲೋಟ, ತಟ್ಟೆ, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಹಾಗೂ ಥರ್ಮೊಕೋಲ್‌ಗಳ ಬಳಕೆ, ಮಾರಾಟ ಹಾಗೂ ಸಂಗ್ರಹವನ್ನು ನಿಷೇಧಿಸಲಾಗಿರುತ್ತದೆ. ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರು ದಪ್ಪನಾದ ಪ್ಲಾಸ್ಟಿಕ್‌ಗಳನ್ನು ಬಳಸಬಹುದೆಂದು ತಪ್ಪು ತಿಳುವಳಿಕೆಯಲ್ಲಿರುತ್ತಾರೆ. ಆದರೆ ಕರ್ನಾಟಕ ಸರ್ಕಾರದಿಂದ ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ನಿಷೇಧಿಸಿದ್ದು, ಯಾವುದೇ ದಪ್ಪ (ಒiಛಿಡಿoಟಿ)ನ ಪ್ರಶ್ನೆಯು ಉದ್ಬವಿಸುವುದಿಲ್ಲ ಎಂಬುದಾಗಿ ಪೌರಾಯುಕ್ತ ರಾಮದಾಸ್ ಸ್ಪಷ್ಟಪಡಿಸಿದ್ದಾರೆ.

ಸರ್ಕಾರವು ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಅಕ್ರಮ ಮಾರಾಟ, ದಾಸ್ತಾನು ಸಂಗ್ರಹಣೆ ಹಾಗೂ ಬಳಕೆ ಕುರಿತಂತೆ ದಂಡದ ಬಗ್ಗೆ ಸೂಚಿಸಿದೆ.

ದಂಡ ಮೂರನೇ ಅಪರಾಧಕ್ಕೆ ಉದ್ದಿಮೆ ಪರವಾನಗಿಯನ್ನು ರದ್ದುಗೊಳಿಸುವುದು ಹಾಗೂ ಕಾನೂನಾತ್ಮಕ ಕ್ರಮಕೈಗೊಳ್ಳಲಾಗುವುದು. ನಗರಸಭೆಯ ಎಲ್ಲಾ ಸಾರ್ವಜನಿಕರು, ಅಂಗಡಿ ಮಾಲೀಕರುಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸದೆ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್ ಕೋರಿದ್ದಾರೆ.