ಕೂಡಿಗೆ, ಮೇ ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಸೋಮಣ್ಣ ಎಂಬವರಿಗೆ ಸೇರಿದ ಮನೆಯ ಗೋಡೆಯು ರಾತ್ರಿ ಮಳೆಯಿಂದಾಗಿ ಕುಸಿತಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಾದ ಅನಂತ, ಚಂದ್ರು, ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಮಧುಸೂದನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ, ಕಾರ್ಯದರ್ಶಿ ಪುನಿತ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಸಿಬ್ಬಂದಿ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.