ಮಡಿಕೇರಿ, ಮೇ ೨೧: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಕೈಗಾರಿಕಾ ವಲಯದಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ.
ಸಿಪೆಟ್ ೨೦೨೨-೨೩ನೇ ಸಾಲಿನ ಉದ್ಯೋಗಾದಾರಿತ ಮತ್ತು ಶೇ. ೧೦೦ ಉದ್ಯೋಗ ಖಚಿತ. ಡಿಪ್ಲೋಮಾ, ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್‌ಲೈನ್-ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ), ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) ೩ ವರ್ಷ ಮತ್ತು ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) ೨ ವರ್ಷದ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥ ಆರ್.ಟಿ. ನಾಗರಳ್ಳಿ ಅವರು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ (ವಿಜ್ಞಾನ) ಮತ್ತು ಬಿಎಸ್‌ಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ ೫ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ hಣಣಠಿs://ಛಿiಠಿeಣ೨೦೨೨.oಟಿಟiಟಿe ಡಿegisಣಡಿಚಿಣioಟಿಜಿoಡಿm.oಡಿg/ಅIPಇಖಿ/ ಅಥವಾ ದೂ: ೦೮೨೧-೨೫೧೦೬೧೮/ ೯೪೮೦೨೫೩೦೨೪/ ೯೭೯೧೪೩೧೮೨೭/ ೯೪೬೬೫೮೫೬೬೯. ವೆಬ್‌ಸೈಟ್: ತಿತಿತಿ.ಛಿiಠಿeಣ.gov.iಟಿ.ನ್ನು ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು (೯೪೬೬೧೪೬೦೦೧) ತಿಳಿಸಿದ್ದಾರೆ.
ಶಿಷ್ಯವೇತನಕ್ಕೆ
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖಾ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ೩೦ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ೪೦ ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ೩ ಅಥವಾ ೫ ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ ೨೦ ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು.
ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು. ತರಬೇತಿ ಅವಧಿಯು ೨ ವರ್ಷಗಳಾಗಿದ್ದು, ಮಾಸಿಕ ೧೦ ಸಾವಿರ ರೂಪಾಯಿಗಳಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ೨.೫೦ ಲಕ್ಷ ರೂ ಮೀರಬಾರದು. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು. ಅಂತಹ ಅಭ್ಯರ್ಥಿಗಳಿಂದ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ. ೧೦ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದಲ್ಲಿ/ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿ ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ ೩ ವರ್ಷದೊಳಗಾಗಿ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‌ರೋಲ್‌ಮೆಂಟ್ ಫೀಯನ್ನು ನೀಡಲಾಗುತ್ತದೆ. ಸದಸ್ಯ ಕಾರ್ಯದರ್ಶಿಯು ಅಧ್ಯಕ್ಷರ ಪೂರ್ವಾನುಮತಿ ಪಡೆದು ಅಭ್ಯರ್ಥಿಯ ಶಿಷ್ಯ ವೇತನವನ್ನು ದೂರು ಬಂದಲ್ಲಿ ಅಥವಾ ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ತಡೆಯಬಹುದು. ಅಧ್ಯಕ್ಷರು ಈ ಬಗ್ಗೆ ಪರಿಶೀಲಿಸಿ ಅಭ್ಯರ್ಥಿಯ ಕಡೆಯಿಂದ ಯಾವುದೇ ಲೋಪವಿಲ್ಲವೆಂದು ಕಂಡು ಬಂದಲ್ಲಿ ತಡೆ ಹಿಡಿದಿರುವ ಶಿಷ್ಯ ವೇತನವನ್ನು ಮರು ಪಾವತಿಸಲು ಆದೇಶಿಸಬಹುದು.
ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯಥಿಗಳಿಗೆ ೧೩೫ ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (೨ ವರ್ಷಗಳ ತರಬೇತಿಗೆ ೧ ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ದಾಖಲಾತಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೨೫೫೩೧. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೦೮೨೭೬-೨೮೧೧೧೫, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ೦೮೨೭೪-೨೪೯೪೭೬ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅವರು ತಿಳಿಸಿದ್ದಾರೆ.