ಮಡಿಕೇರಿ, ಮೇ ೨೦: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ೪ ವಿಭಾಗದ ವಾರ್ಷಿಕ ಪ್ರಶಸ್ತಿಗೆ ೫ ಪತ್ರಕರ್ತರು ಭಾಜನರಾಗಿದ್ದಾರೆ. ತಾ. ೨೫ ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕಿಶೋರ್ ಶೆಟ್ಟಿ ಅವರ ‘ನೆಟ್ವರ್ಕ್ಗಾಗಿ ಮರವೇರುತ್ತಿರುವ ವಿದ್ಯಾರ್ಥಿಗಳು’ ಎಂಬ ವರದಿ ಪಡೆದುಕೊಂಡಿದೆ.
ಜಿಲ್ಲಾ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ಬಿ.ಎಸ್. ರಂಗನಾಥರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಹೆಚ್.ಕೆ. ಜಗದೀಶ್ ಅವರ ‘ಪ್ರಕೃತಿ ಮುನಿಸು ರೈತ ಕಂಗಾಲು’ ವರದಿ ಭಾಜನವಾಗಿದೆ.
ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಕುರಿತ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಕೆ.ಬಿ. ಜಗದೀಶ್ ಜೋಡುಬೀಟಿ ಅವರ ‘ರಾಜ್ಯಾದ್ಯಂತ ೩೬೦ ಕೆರೆ ಪುನಶ್ಚೇತನ’ ವರದಿ ಭಾಜನವಾಗಿದೆ.
ರಾಷ್ಟಿçÃಯ ಸಮಿತಿ ಸದಸ್ಯರಾಗಿದ್ದ ಎಸ್.ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನು ಮೈಸೂರು ಮಿತ್ರದಲ್ಲಿ ಪ್ರಕಟಗೊಂಡ ಚಿಮ್ಮಣಮಾಡ ದರ್ಶನ್ ದೇವಯ್ಯ ಅವರ ‘ಮಹಿಳೆಯರ ಹಾಕಿ ಟೂರ್ನಿಗೆ ಚಾಲನೆ’ ಹಾಗೂ ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ಆರ್. ಸುಬ್ರಮಣಿ ಅವರ ನಿಸರ್ಗ ವಾರಿಯರ್ ಚಾಂಪಿ ಯನ್ ವರದಿ ಪಡೆದುಕೊಂಡಿದೆ.