ಮಡಿಕೇರಿ: ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಕಾಫಿ ಬೋರ್ಡ್ (ಕಂಡಕರೆ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯಾರ್ಥಿಗಳನ್ನು ವಿಶೇಷವಾಗಿ ಬರಮಾಡಿಕೊಂಡರು.
ಚೆಟ್ಟಳ್ಳಿ ಗ್ರಾ.ಪಂ.ಯ ಕಾಫಿ ಬೋರ್ಡ್ ವಾರ್ಡ್ನ ಸದಸ್ಯೆ ನಂದಿನಿ ಉದಯಕುಮಾರ್ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ವತಿಯಿಂದ ನೂತನ ಉದ್ಯಾನವನ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.
ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಶಾಲೆಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು. ಶಿಕ್ಷಕ ರತೀಶ್ ಶಿಕ್ಷಣದ ಮಹತ್ವವನ್ನು ವಿವರಿಸಿದರು. ಮುಖ್ಯ ಶಿಕ್ಷಕ ಮೇಚನ ಪೂಣಚ್ಚ ಸ್ವಾಗತಿಸಿ, ಸಹ ಶಿಕ್ಷಕಿ ಜನಿತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಸ್‌ಡಿಎಂಸಿ ಉಪಾಧ್ಯಕ್ಷರು, ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು ಸಿಹಿ ನೀಡಿ ಸ್ವಾಗತಿಸಲಾಯಿತ್ತಲ್ಲದೆ ಮಧ್ಯಾಹ್ನದ ಬಿಸಿಯೂಟದಲ್ಲೂ ಸಿಹಿ ಹಂಚಲಾಯಿತು.ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ೨೦೨೨-೨೩ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಿ ಶಾಲಾ ವಿದ್ಯಾರ್ಥಿಗಳಿಗೆ ಹೂವನ್ನು ನೀಡುವುದರ ಮೂಲಕ ಶಿಕ್ಷಕರು ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಬಿಸಿ ಊಟದೊಂದಿಗೆ ಸಿಹಿಯನ್ನು ಹಂಚಲಾಯಿತು.ಸುAಟಿಕೊಪ್ಪ: ಶಾಲಾ ಪ್ರಾರಂಭೋತ್ಸವ ಅಂಗವಾಗಿ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಶಿಕ್ಷಕರು ಮುಖ್ಯ ದ್ವಾರದ ಬಳಿ ನಿಂತು ಮಕ್ಕಳನ್ನು ಪುಷ್ಪ ಹಾಗೂ ಸಿಹಿ ತಿಂಡಿಗಳನ್ನು ನೀಡಿ ಬರ ಮಾಡಿಕೊಂಡರು.
ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಶಿಕ್ಷಕರುಗಳಾದ ಸಿ.ಟಿ. ಸೋಮಶೇಖರ್, ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್, ಪ್ರಕಾಶ್, ಎಸ್.ಆರ್. ಚಿತ್ರಾ, ಶಾಂತ ಹೆಗಡೆ, ಲಿಯೊನ, ಎಂ.ಪಿ. ಜಯಶ್ರೀ ಹಾಜರಿದ್ದರು. ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ ಅವರು ಶಾಲೆಗೆ ಭೇಟಿ ನೀಡಿ ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ಶಿಕ್ಷಕರು ಮಕ್ಕಳೊಂದಿಗೆ ಪಠ್ಯ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡರು.
ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯದ್ವಾರದಲ್ಲಿ ಬಾಳೆ ಹಾಗೂ ವಿವಿಧ ಬಣ್ಣದ ಧ್ವಜಗಳಿಂದ ಶಾಲಾ ಆವರಣವನ್ನು ಸಿಂಗರಿಸಲಾಗಿದ್ದು, ಶಾಲಾ ವ್ಯವಸ್ಥಾಪಕ ಫಾ. ಅರುಳ್ ಸೆಲ್ವಕುಮಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಸೆಲ್ವರಾಜ್, ಶಿಕ್ಷಕ, ಶಿಕ್ಷಕಿಯರು ಹಾಗೂ ಸಿಬ್ಬಂದಿಗಳು ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿ ಶಾಲೆಗೆ ಬರಮಾಡಿಕೊಂಡರು.
ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವೀರಾ ಡಿಸೋಜ ಹಾಗೂ ಶಿಕ್ಷಕಿಯರು ಮಕ್ಕಳಿಗೆ ಸಿಹಿಯನ್ನು ವಿತರಿಸಿ ಪ್ರೀತಿ ಪೂರ್ವಕವಾಗಿ ಬರಮಾಡಿಕೊಂಡರು.
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಕೆದಕಲ್, ಹೊರೂರು, ಕಂಬಿಬಾಣೆ, ಕೊಡಗರಹಳ್ಳಿ, ೭ನೇ ಹೊಸಕೋಟೆ, ಕಾನ್‌ಬೈಲ್, ಮಂಜಿಕೆರೆ, ಹೆರೂರು ಸೇರಿದಂತೆ ಮತ್ತಿತರ ಗ್ರಾಮಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪುಷ್ಪಗುಚ್ಚ ಸಿಹಿ ವಿತರಿಸುವ ಮೂಲಕ ಶಾಲೆಗಳಿಗೆ ಬರಮಾಡಿಕೊಂಡರು.ಶನಿವಾರಸAತೆ: ಶನಿವಾರಸಂತೆಯ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಪ್ರಾಂಶುಪಾಲೆ ಸುಜಲಾದೇವಿ ಹಾಗೂ ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸ್ವಾಗತಿಸಿದರು.ಚೆಟ್ಟಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೆಟ್ಟಳ್ಳಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತಪ್ಪ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕ ವರ್ಗದವರು ಭಾಗವಹಿಸಿದ್ದರು.
ಮಕ್ಕಳಿಗೆ ಹೂಗುಚ್ಚ ನೀಡಿ, ಸಿಹಿಯನ್ನು ಹಂಚಿ ಬರಮಾಡಿಕೊಳ್ಳಲಾಯಿತು. ಮೊದಲನೆ ದಿನ ಆಟದ ಹಬ್ಬವನ್ನು ಆಡಿಸಲಾಯಿತು. ಅಭ್ಯಾಸದ ಹಾಳೆ ಹಾಗೂ ಚಟುವಟಿಕೆಯುಕ್ತವಾದ ಕಲಿಕೆಯ ಬಗ್ಗೆ ಪೋಷಕರಿಗೆ ತಿಳಿಸಲಾಯಿತು. ಈ ಸಂದರ್ಭ ೧೯೮೮-೮೯ನೇ ಸಾಲಿನಲ್ಲಿ ೭ನೇ ತರಗತಿಯಲ್ಲಿ ಈ ಶಾಲೆಯಲ್ಲಿ ಓದಿದ ಸುಮಾರು ೨೫ ವಿದ್ಯಾರ್ಥಿಗಳು ಆಗಮಿಸಿ ಶಾಲೆಯಲ್ಲಿ ಸಂತೋಷ ಕೂಟವನ್ನು ಏರ್ಪಡಿಸಿ, ಶಾಲೆಯ ಮಕ್ಕಳ ಕಲಿಕೆಗೆ ಪ್ರೊಜೆಕ್ಟರ್ ಅನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಪೋಷಕರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ರಮಾ ಅವರು ಸ್ವಾಗತಿಸಿದರು. ಸಿಆರ್‌ಪಿ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ವಂದಿಸಿದರು.