ಚೆಟ್ಟಳ್ಳಿ, ಮೇ ೨೦: ಯಾವುದೇ ಕಾಲೇಜಿನ ಏಳಿಗೆಯ ಹಿಂದೆ ಆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದ್ದು ಎಂದು ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಅಭಿಪ್ರಾಯಪಟ್ಟರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವೀರಾಜಪೇಟೆ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕಾಲೇಜು ಮತ್ತು ವಿದ್ಯಾರ್ಥಿಗಳ ನಡುವಿನ ಸಂಬAಧ ಸಕ್ರಿಯವಾಗಿ ಮುಂದುವರಿಯುತ್ತಿರುವುದು ಸಂತೋಷದಾಯಕ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ನ್ಯಾಕ್ ಸಂಬAಧಿತ ತಜ್ಞರ ತಂಡವು ಕಾಲೇಜಿಗೆ ಭೇಟಿ ನೀಡುವುದರಿಂದ ಹಳೆಯ ವಿದ್ಯಾರ್ಥಿ ಸಂಘವನ್ನು ಮತ್ತಷ್ಟು ಬಲಿಷ್ಠ ಹಾಗೂ ಚುರುಕುಗೊಳಿಸಬೇಕಾಗಿದೆ. ಆದ್ದರಿಂದ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿ ಸಂಘದ ಸಂಚಾಲಕ ರುದ್ರ, ಕಾರ್ಯದರ್ಶಿ ಸುಮ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.