ಮಡಿಕೇರಿ ಮೇ ೨೧: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿಗೆ ಸಂಬAಧಿಸಿAತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ಮೂಲಕ ಶನಿವಾರ ಪರಿಶೀಲನಾ ಸಭೆ ನಡೆಸಿದರು.

ಮುಂಗಾರು ಸಂದರ್ಭದಲ್ಲಿ ಜಿಲ್ಲೆಯ ಭೂಕುಸಿತ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಿಸುವುದು ಹಾಗೂ ಈ ಹಿಂದೆ ಪ್ರಾಕೃತಿಕ ವಿಕೋಪ ದಿಂದಾಗಿರುವ ಅನಾಹುತಗಳು ಮರುಕಳುಹಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದರು. ಕೊಡಗು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳು ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವುದು. ಭೂ ಕುಸಿತದಿಂದ ಸಾವು ಸಂಭವಿಸದAತೆ ಜನರನ್ನು ಸ್ಥಳಾಂತರ ಮಾಡಲು ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.

ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಎಸಿ, ಕೃಷಿ ಇಲಾಖೆ ಅಧಿಕಾರಿಗಳು, ಮುಂದಿನ ೨-೩ ದಿನಗಳಲ್ಲಿ ಕಡ್ಡಾಯವಾಗಿ ಹಾನಿಗೊಳಗಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪರಿಣಾಮಕಾರಿ ಯಾಗಿ ಕೆಲಸ ಮಾಡಬೇಕು. ಮುಖ್ಯ ಕಾರ್ಯದರ್ಶಿಗಳಿಗೆ ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕು. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕೆಲಸ ನಿರ್ವಹಿಸುವುದು. ಕಂದಾಯ, ಆರ್.ಡಿ.ಪಿ.ಆರ್, ಸಣ್ಣ ನೀರಾವರಿ, ಮಾಹಿತಿ ಪಡೆದು ಪ್ರವಾಹಕ್ಕೆ ಸಂಬAಧಿಸಿದ ಕಡತಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡುವುದು. ಪೂರ್ಣ ಹಾನಿಯಾಗಿರುವ ಮನೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ನಿರ್ದೇಶಿಸಿದರು.

ಮುಂದಿನ ೧೫ ದಿನಗಳ ಕಾಲ ಯಾವುದೇ ಅಧಿಕಾರಿಗೆ ರಜೆ ಮಂಜೂರು ಮಾಡುವಂತಿಲ್ಲ. ಪಿ.ಡಿ.ಓಗಳು ಸ್ಥಳದಲ್ಲಿದ್ದು ಪರಿಶೀಲನೆ ಮಾಡತಕ್ಕದ್ದು, ಜಿಲ್ಲೆಗಳಲ್ಲಿ ಬೆಳೆ ಹಾನಿ, ಜಾನುವಾರು ಹಾಗೂ ಮಾನವ ಜೀವ ಹಾನಿ, ಮೂಲಸೌಕರ್ಯ ಸೌಲಭ್ಯಗಳಿಗೆ ಉಂಟಾಗಿರುವ ಹಾನಿ ಮತ್ತು ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ತಿಳಿಸಿದ ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ೭೨೮.೮೫ ಕೋಟಿ ರೂ.ಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಬೆಳೆ ಹಾನಿ ಹಾಗೂ ಮನೆ ಹಾನಿಯ ಕುರಿತು ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸುವುದು. ಕಾಳಜಿ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸುವುದು. ಪಿ.ಡಿ.ಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಕೂಡಲೇ ಛಾಯಾಗ್ರಾಹಕರೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿ, ಮನೆ ಹಾನಿಯ ಮಾಹಿತಿ ದಾಖಲಿಸಬೇಕು.

(ಮೊದಲ ಪುಟದಿಂದ) ಹಾನಿಗೊಳಗಾಗಿರುವ ಮನೆಗಳ ವಿವರ ಬಿಟ್ಟು ಹೋಗಬಾರದು. ಅನಗತ್ಯ ಮನೆಗಳ ವಿವರ ಸೇರ್ಪಡೆ ಯಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮೀಕ್ಷೆ ಕಾರ್ಯಕ್ಕೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಂಜಿನಿಯರ್ ಗಳನ್ನು ಹೆಚ್ಚಾಗಿ ಬಳಸುವುದು. ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಕೂಡಲೇ ಪರಿಹಾರ ವಿತರಿಸಲು ಕ್ರಮಕೈಗೊಳ್ಳಬೇಕು. ಬೆಳೆ ಹಾನಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಮುಂಚೂಣಿಯಲ್ಲಿ ಇದ್ದು ಸಮೀಕ್ಷೆ ಕಾರ್ಯಗಳನ್ನು ನಡೆಸುವುದು. ನಿಯಮಿತವಾಗಿ ಪ್ರವಾಹಕ್ಕೊಳಗಾಗುವ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೂಡಲೇ ಕೈಗೊಳ್ಳುವುದು. ನದಿಗಳು, ಅಣೆಕಟ್ಟುಗಳ ನೀರಿನ ಪ್ರಮಾಣದ ಬಗ್ಗೆ ಎಚ್ಚರಿಕೆ ವಹಿಸುವುದು, ಎಸ್‌ಡಿಆರ್‌ಎಫ್‌ನ ಎರಡು ಹೆಚ್ಚುವರಿ ಕಂಪನಿಗಳ ಸ್ಥಾಪನೆ ಮಾಡುವಂತೆ ಹೇಳಿದರು. ಮುಂಗಾರು ಸಂದರ್ಭದಲ್ಲಿ ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.

ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ಪಿಡಬ್ಲುö್ಯಡಿ ಇಇ ನಾಗರಾಜು, ಭೂ ದಾಖಲೆಗಳ ಉಪನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಸಪ್ಪ, ಪ್ರಕೃತಿ ವಿಕೋಪದ ಸಂಯೋಜಕರಾದ ಅನನ್ಯ ವಾಸುದೇವ್ ಇತರರು ಇದ್ದರು.