ಮಡಿಕೇರಿ, ಮೇ ೨೧: ಪೊನ್ನಂಪೇಟೆಯ ಸಾಯಿಶಂಕರ ವಿದ್ಯಾಸಂಸ್ಥೆಯಲ್ಲಿ ಭಜರಂಗದಳ ವತಿಯಿಂದ ನಡೆದ ಪ್ರಶಿಕ್ಷಣ ವರ್ಗ ತರಬೇತಿ ಸಂಬAಧ ರಾಷ್ಟಿçÃಯ ತನಿಖಾ ದಳದಿಂದ (ಎನ್.ಐ.ಎ.) ತನಿಖೆ ನಡೆಸುವಂತೆ ಒತ್ತಾಯಿಸಿ ಎಸ್.ಡಿ.ಪಿ.ಐ. ಪ್ರತಿಭಟನೆ ನಡೆಸಿತು. ನಗರದ ಚೌಕಿ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾನಿರತರು ಘೋಷಣೆ ಕೂಗಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.
ನಗರಸಭಾ ಸದಸ್ಯ ಅಮೀನ್ ಮೊಹ್ಸಿನ್ ಮಾತನಾಡಿ, ತರಬೇತಿ ಹೆಸರಿನಲ್ಲಿ ಸಂಘಪರಿವಾರ ಭಯೋತ್ಪಾದಕ ಕೃತ್ಯ ನಡೆಸಲು ಸಂಚು ರೂಪಿಸಿ ಶಾಂತಿಯುತ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದೆ. ಶಸ್ತಾçಸ್ತç ತರಬೇತಿ ಪಡೆದವರು ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಆರೋಪಿಸಿದ ಅವರು, ಭಜರಂಗದಳ ಕಾರ್ಯಕರ್ತರಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಮೆರವಣಿಗೆಯಲ್ಲಿ ಶಸ್ತಾçಸ್ತç ಹಿಡಿದು ಭಯದ ವಾತಾವರಣವನ್ನು ಹುಟ್ಟುಹಾಕುತ್ತಿದ್ದಾರೆ. ಈ ಹಿನ್ನೆಲೆ ಸಂಘಟನೆಯನ್ನು ನಿಷೇಧ ಮಾಡಬೇಕೆಂದು ಒತ್ತಾಯಿಸಿದರು.
ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಖಲೀಲ್ ಮಾತನಾಡಿ, ತರಬೇತಿ ನೀಡಿದವರ ವಿರುದ್ಧ ಮೊಕ್ಕದಮೆ ದಾಖಲು ಮಾಡಬೇಕು. ತರಬೇತಿಗೆ ತೆರಳಿದ್ದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರ ವಿರುದ್ಧವೂ ಪ್ರಕರಣ ದಾಖಲಿಸಿ ಅವರ ಸದಸ್ಯತ್ವ ಸ್ಥಾನವನ್ನು ವಜಾಗೊಳಿಸಬೇಕು. ಈ ಸಂಬAಧ ಎನ್.ಐ.ಎ. ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದರು.
ಜಿಲ್ಲಾ ಪ್ರಮುಖರಾದ ಅಬ್ದುಲ್ ಅಡ್ಕರ್, ಮನ್ಸೂರ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಉಸ್ಮಾನ್, ಕೋಶಾಧಿಕಾರಿ ಶಂಶೀರ್ ಸೇರಿದಂತೆ ಇನ್ನಿತರರು ಹಾಜರಿದ್ದರು.