ಮಡಿಕೇರಿ, ಮೇ ೨೧: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ೨೦೨೧-೨೨ನೇ ಸಾಲಿನ ಗಡಿ ಸಾಂಸ್ಕೃತಿಕ ಉತ್ಸವ ತಾ. ೨೫ ರಂದು ಮಡಿಕೇರಿಯಲ್ಲಿ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್; ತಾ. ೨೫ ರಂದು ಬೆಳಿಗ್ಗೆ ೧೦ ಗಂಟೆಗೆ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಉದ್ಘಾಟಿಸುವರು. ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ಕರ್ನಾಟಕ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಸುಜಾ ಕುಶಾಲಪ್ಪ, ನಗರ ಸಭಾಧ್ಯಕ್ಷೆ ಅನಿತಾ ಪೂವಯ್ಯ, ಮೂಡಾ ಅಧ್ಯಕ್ಷ ರಮೇಶ್ ಹೊಳ್ಳ ಉಪಸ್ಥಿತರಿರುವರು. ‘ಗಡಿ ಪ್ರದೇಶದ ಜನ ಜೀವನ’ ವಿಷಯದ ಕುರಿತಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉಪನ್ಯಾಸ ನೀಡುವರು ಎಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ
ಮಧ್ಯಾಹ್ನ ೧೨ ಗಂಟೆಯಿAದ ೧.೩೦ ಗಂಟೆವರೆಗೆ ಮೈಸೂರಿನ ಡಾ. ಸಿ.ಆರ್. ರಾಘವೇಂದ್ರ ಅವರ ನಾದಲಹರಿ ತಂಡದವರಿAದ ಗೀತ ಗಾಯನ ಹಾಗೂ ಮಡಿಕೇರಿಯ ಕಲಾ ಕಾವ್ಯ ನಾಟ್ಯ ಶಾಲಾ ತಂಡದ ವಿಧುಷಿ ದುಗ್ಗಳ ಕಾವ್ಯಶ್ರೀ ಕಪಿಲ್ ಶಿಷ್ಯರಿಂದ ನೃತ್ಯ ವೈಭವ ನಡೆಯಲಿದೆ ಎಂದು ಕಾಮತ್ ತಿಳಿಸಿದರು.
ವಿಚಾರ ಸಂಕಿರಣ-ಸAವಾದ
ಅಪರಾಹ್ನ ೨ ರಿಂದ ೪ ಗಂಟೆವರೆಗೆ ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ. ‘ಕೊಡಗು ಗಡಿನಾಡ ಸಮಸ್ಯೆಗಳು ಮತ್ತು ಪರಿಹಾರದ ಮಾರ್ಗೋಪಾಯಗಳು’ ವಿಷಯದ ಕುರಿತಾಗಿ ಕೃಷಿಕ ಹಾಗೂ ಬರಹಗಾರ ಗೋಪಾಲ್ ಪೆರಾಜೆ ಹಾಗೂ ‘ಕೊಡಗು ಗಡಿ ಭಾಗದಲ್ಲಿ ಭಾಷೆ ಮತ್ತು ಸಾಂಸ್ಕೃತಿಕ ಬಾಂಧವ್ಯ’ ವಿಷಯದಲ್ಲಿ ತೂಕ್ ಬೊಳಕ್ ವಾರಪತ್ರಿಕೆ ಸಂಪಾದಕ ಮಧೋಶ್ ಪೂವಯ್ಯ ಅವರುಗಳು ಉಪನ್ಯಾಸ ನೀಡುವರು. ಕೂರ್ಗ್ ಎಕ್ಸ್ಪ್ರೆಸ್ ವಾರಪತ್ರಿಕೆ ಸಂಪಾದಕ ಶ್ರೀಧರ್‌ನೆಲ್ಲಿತ್ತಾಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕನಾಥ ಅಮೆಚೂರು, ಪಂಕಜ, ನಾಪಂಡ ಕಾಳಪ್ಪ, ಕೆ.ಯು. ರಂಜಿತ್, ಕೋಡೀರ ವಿನೋದ್ ನಾಣಯ್ಯ, ಸ್ಮಿತಾ ಅಮೃತರಾಜ್, ಕೋಳುಮುಡಿಯನ ಅನಂತ್‌ಕುಮಾರ್, ಬೇಕಲ್ ರಮಾನಾಥ್, ನೆರವಂಡ ಉಮೇಶ್, ಕುಡಿಯರ ಮುತ್ತಪ್ಪ, ಹೊಸೂರು ಜೆ.ಸತೀಶ್,
(ಮೊದಲ ಪುಟದಿಂದ) ಕುಂಡ್ಯೋಳAಡ ರಮೇಶ್ ಮುದ್ದಯ್ಯ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಮಾರೋಪ: ಸಂಜೆ ೪.೩೦ ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸಮಾರೋಪ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಕರ್ನಾಟಕ ರಾಜ್ಯ ಮತ್ತು ಕೊಡಗು ಜಿಲ್ಲಾ ಸ್ತಿçÃಶಕ್ತಿ ಒಕ್ಕೂಟದ ಅಧ್ಯಕ್ಷೆ ಎಂ.ಎA. ರೆಹನಾ ಸುಲ್ತಾನ್ ಪಾಲ್ಗೊಳ್ಳಲಿದ್ದಾರೆ.
ಸಾಂಸ್ಕೃತಿಕ ಸಂಜೆ: ಸಂಜೆ ೫ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್ ಉದ್ಘಾಟಿಸುವರು. ಶಕ್ತಿ ದಿನಪತ್ರಿಕೆ ಸಂಪಾದಕ ಜಿ. ಚಿದ್ವಿಲಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅಂಬೆಕಲ್ ನವೀನ್, ವೀರಾಜಪೇಟೆಯ ರಾಜೇಶ್ ಪದ್ಮನಾಭ, ಪೊನ್ನಂಪೇಟೆಯ ಕೋಳೇರ ದಯಾ ಚಂಗಪ್ಪ, ಕುಶಾಲನಗರದ ಕೆ.ಎಸ್. ಮೂರ್ತಿ, ಸೋಮವಾರಪೇಟೆಯ ಎಸ್.ಡಿ.ವಿಜೇತ್, ಲೇಖಕ ಕಲಾವಿದರ ಬಳಗದ ಉಪಾಧ್ಯಕ್ಷ ಎಂ.ಇ. ಮೊಹಿದ್ದಿನ್, ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿ ವಿಲ್ಫೆçಡ್ ಕ್ರಾಸ್ತಾ, ಕೋಶಾಧಿಕಾರಿ ಕಡ್ಲೇರ ತುಳಸಿ ಭಾಗವಹಿಸುವರು. ನಂತರ ವಿವಿಧ ಕಲಾತಂಡಗಳಿAದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಗಡಿ ಸಮಸ್ಯೆ ಅರಿಯಲು ಸಹಕಾರಿ
ಬಳಗದ ಗೌರವ ಸಲಹೆಗಾರ ಟಿ.ಪಿ. ರಮೇಶ್ ಮಾತನಾಡಿ, ಭಾರತ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರಿಂದ ಗಡಿ ಪ್ರದೇಶದ ಸಮಸ್ಯೆಗಳನ್ನು ಅರಿತುಕೊಂಡು ಪರಿಹರಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಶಾಲೆ, ರಸ್ತೆ ಸಂಪರ್ಕ, ಆರೋಗ್ಯ ಕೇಂದ್ರ ಸೇರಿದಂತೆ ಗಡಿ ಪ್ರದೇಶದಲ್ಲಿ ಯಥೇಚ್ಛ ಸಮಸ್ಯೆಗಳಿವೆ. ಇಂತಹ ಕಾರ್ಯಕ್ರಮಗಳಿಂದ ಗಡಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಸರಕಾರದ ಗಮನ ಸೆಳೆಯಲು ಸಾಧ್ಯವಾಗುತ್ತದೆ. ಕಾರ್ಯಕ್ರಮದ ಉಪನ್ಯಾಸ, ಸಂವಾದದಲ್ಲಿನ ವಿಚಾರಗಳನ್ನು ಸಂಗ್ರಹಿಸಿ ಗಡಿ ಪ್ರಾಧಿಕಾರದ ಮೂಲಕ ಸರಕಾರಕ್ಕೆ ಸಲ್ಲಿಸಲಾಗುವದು ಎಂದು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಭವನ ನಿರ್ಮಾಣಕ್ಕೆ ಪ್ರಾಧಿಕಾರದಿಂದ ಅನುದಾನ ನೀಡುವದಾಗಿ ಅಧ್ಯಕ್ಷರು ಈಗಾಗಲೇ ಘೋಷಿಸಿದ್ದಾರೆ. ಅಲ್ಲದೆ, ಮಹಿಳಾ ಸಾಹಿತಿಗಳ ಕಾರ್ಯಕ್ರಮಕ್ಕೂ ಅನುದಾನ ದೊರಕಲಿದೆ. ಪ್ರಾಧಿಕಾರದೊಂದಿಗೆ ಸೌಹಾರ್ದಯುತವಾಗಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವದೆಂದು ಅವರು ಹೇಳಿದರು. ಗೋಷ್ಠಿಯಲ್ಲಿ ಬಳಗದ ಉಪಾಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ಕೋಶಾಧಿಕಾರಿ ಕಡ್ಲೇರ ತುಳಸಿ ಮೋಹನ್, ನಿರ್ದೇಶಕ ಅಂಬೆಕಲ್ ನವೀನ್ ಕುಶಾಲಪ್ಪ ಇದ್ದರು.