ಮಡಿಕೇರಿ, ಮೇ. ೨೧: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ತಾ. ೨೭ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಡಿಕೇರಿ ತಾಲೂಕಿನ ಯವಕಪಾಡಿ ಗ್ರಾಮದ ಕಕ್ಕಬ್ಬೆ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಂಬAಧಿಸಿದAತೆ, ತಾ. ೨೫ ರೊಳಗೆ ತಮ್ಮ ಅಹವಾಲುಗಳ ಅರ್ಜಿಯನ್ನು ಸಂಬAಧಪಟ್ಟ ನಾಡಕಚೇರಿ, ತಾಲೂಕು ಕಚೇರಿಗೆ ಸಲ್ಲಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ಕೋರಿದ್ದಾರೆ.