ಸುಂಟಿಕೊಪ್ಪ, ಮೇ ೨೨ : ಸುಂಟಿಕೊಪ್ಪ ಗದ್ದೆಹಳ್ಳದ ಬಳಿಯಲ್ಲಿ ಮಿನಿಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಂಟಿಕೊಪ್ಪದಿAದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಿನಿಟಿಪ್ಪರ್ (ಕೆಎ-೧೨ ಬಿ.೭೮೨೯) ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು (ಕೆಎ-೧೧.ಬಿ೨೨೯೦) ನಡುವೆ ಡಿಕ್ಕಿ ಸಂಭವಿಸಿದೆ. ಸಿಕಂದರಾಬಾದ್‌ನಿAದ ಜಿಲ್ಲೆಯ ಪ್ರವಾಸಕ್ಕೆಂದು ಬಂದಿದ್ದ ದಂಪತಿ ಹಾಗೂ ಈರ್ವರು ಮಕ್ಕಳು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.