ಸಿದ್ದಾಪುರ, ಮೇ ೨೩: ಕ್ಷುಲ್ಲಕ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿದ್ದಾಪುರ ಸಮೀಪದ ತೂಬನಕೊಲ್ಲಿಯಲ್ಲಿ ನಡೆದಿದೆ. ಚಿತ್ರ (೨೬) ಮೃತ ದುರ್ದೈವಿ. ಯುವತಿಗೆ ಕಳೆದ ಒಂದು ತಿಂಗಳ ಹಿಂದೆ ಮೂರ್ನಾಡು ಸಮೀಪದ ಹೊದ್ದೂರು ಹರೀಶ ಎಂಬಾತನೊAದಿಗೆ ಈಕೆಯ ಮದುವೆ ನಡೆದಿತ್ತು. ಕೆಲವು ದಿನಗಳ ಹಿಂದೆ ಈಕೆ ತೂಬನಕೊಲ್ಲಿ ಲೈನ್ ಮನೆಯಲ್ಲಿರುವ ತನ್ನ ತಾಯಿಯ ಮನೆಗೆ ಬಂದಿದ್ದಳು. ಇಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಭೇಟಿ ನೀಡಿ ಪರಿಶೀಲಿಸಿದರು. ಸಿದ್ದಾಪುರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.