ಚೆಟ್ಟಳ್ಳಿ, ಮೇ ೨೩: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮಾದರಿ ಕಾಲೇಜನ್ನಾಗಿ ಪರಿವರ್ತಿಸಲು ಎಲ್ಲರೂ ಬದ್ಧರಾಗಬೇಕೆಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕಾಲೇಜಿನ ಸಿ.ಡಿ.ಸಿ.ಯ ಅಧ್ಯಕ್ಷ ಕೆ.ಜಿ. ಬೋಪಯ್ಯ ಕರೆ ನೀಡಿದರು.

ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಮುಂದಿನ ಮೂರು ತಿಂಗಳೊಳಗೆ ಕಾಲೇಜಿಗೆ ನ್ಯಾಕ್ ತಂಡವು ಭೇಟಿ ನೀಡುತ್ತಿರುವು ದರಿಂದ ಸಂಬAಧಿಸಿದ ಎಲ್ಲಾ ಸೂಕ್ತ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲು ಕೆ.ಜಿ. ಬೋಪಯ್ಯ ಸೂಚಿಸಿದರು. ಅಭಿವೃದ್ಧಿ ಪರ ಕೆಲಸಗಳು ಮತ್ತು ಕಾಲೇಜಿನ ಏಳಿಗೆಗಾಗಿ ಎಲ್ಲಾ ರೀತಿಯ ಸಹಕಾರ ಸದಾ ಇರುತ್ತದೆ. ಕಾಲೇಜಿನ ಅಭಿವೃದ್ಧಿಗೆ ಸಂಬAಧಿಸಿದAತೆ ನಡೆಯುತ್ತಿರುವ ಕಟ್ಟಡ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೇಶಿಸಿದರು. ಈ ಸಂದರ್ಭ ಸಿ.ಡಿ.ಸಿ. ಸಮಿತಿ ಸದಸ್ಯರಾದ ಮೂಕೊಂಡ ಶಶಿ ಸುಬ್ರಮಣಿ, ಮುಲ್ಲೆಂಗಡ ಕುಟ್ಟಪ್ಪ, ತಸ್ನಿಂ ಅಖ್ತರ್, ವಿಷ್ಣು ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ ಕೆ.ಸಿ. ದಯಾನಂದ ಇದ್ದರು.