ಮಡಿಕೇರಿ ಮೇ ೨೪ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕಾಂಗ್ರೆಸ್ ನಿಂದ ನಾಲ್ವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಾದ ಗೋಣಿಕೊಪ್ಪದ ಹೆಚ್.ಬಿ.ಮುರುಗ, ಹರಿದಾಸ್ ಮಣಿ, ತಂಬಿ ಹಾಗೂ ಶ್ರೀಜಾ ಮಣಿ ಅವರುಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿ ಪಕ್ಷದ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆದೇಶಿಸಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಬ್ಲಾಕ್ ಹಾಗೂ ಗೋಣಿಕೊಪ್ಪ ನಗರ ಕಾಂಗ್ರೆಸ್ ನೀಡಿದ ದೂರಿನ ಹಿನ್ನೆಲೆ ಈ ಕ್ರಮ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.