ವೀರಾಜಪೇಟೆ, ಮೇ ೨೪: ನಿಷ್ಟೆಯಿಂದ ತನ್ನ ಸೇವೆಯನ್ನು ಮುಂದುವರಿಸಿಕೊAಡು ಸಾಗಿದರೆ ಪಕ್ಷ ಗುರುತಿಸಿ ಸ್ಥಾನಮಾನಗಳನ್ನು ನೀಡುತ್ತದೆ ಎಂದು ಕೆ.ಪಿ.ಸಿ.ಸಿ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ವೀರಾಜಪೇಟೆ ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ನಗರದ ಗಣಪತಿ ಆರ್ಕಿಡ್ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ೩೧ ನೇ ಸಂಸ್ಮರಣೆ ಕಾರ್ಯಕ್ರಮ ಮತ್ತು ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಕಾರ್ಯಕ್ರಮಕ್ಕೆ ಆಗಮಿಸಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಎ.ಎಸ್. ಪೊನ್ನಣ್ಣ ಅವರು, ದೇಶ ಕಂಡ ಅತ್ಯದ್ಬುತ ಪ್ರಧಾನಿ ಅಂದರೆ ರಾಜೀವ್ ಗಾಂಧಿ ಅವರು ದೇಶದ ಉನ್ನತ್ತಿಕರಣಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ ಎಂದರು.

ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪಕ್ಷಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಕಾರ್ಯಕರ್ತರು ಸಂದೇಶಗಳನ್ನು ಹಾಕುತ್ತಿರುವುದು ಕಂಡುಬAದಿದೆ ಇವರ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗುತ್ತದೆ. ಚುನಾವಣೆಯನ್ನು ಎದುರು ನೋಡುವ ಸಂದರ್ಭದಲ್ಲಿ ಇಂತಹ ಬೆಳೆವಣಿಗೆಗಳಿಗೆ ಕಡಿವಾಣ ಹಾಕಬೇಕು. ಕಾರ್ಯಕರ್ತರು ಪಕ್ಷಕ್ಕೆ ಸಲ್ಲಿಸುವ ಬದ್ಧತೆಯನ್ನು ಪರಿಗಣಿಸಿ ಪಕ್ಷವು ಸೂಕ್ತ ಪದವಿಗಳನ್ನು ನೀಡಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ಯೋಜನೆಗಳ ವಿರುದ್ದ ಸಂಘಟನಾತ್ಮಕ ಹೋರಾಟಗಳನ್ನು ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗು ತ್ತದೆ. ಎಂದು ಹೇಳಿದರು.

ವೀರಾಜಪೇಟೆ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಮಾತನಾಡಿ, ಬ್ಲಾಕ್ ಸಮಿತಿಯಲ್ಲಿ ೧೭ ವಲಯ ಸಮಿತಿ ಗಳಿವೆ. ಸಮಿತಿಯ ಕೆಲವು ಅಧ್ಯಕ್ಷರು ಗಳು ಪಕ್ಷದ ಸಭೆಗಳಿಗೆ ಸತತವಾಗಿ ಗೈರುಹಾಜರಾಗುತ್ತಿರುವುದು ಪಕ್ಷ ಸಂಘಟನೆಗೆ ಹಿನ್ನಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ನಿರ್ಣಯ ತೆಗೆದುಕೊಳ್ಳಬೇಕು ಸಮಿತಿಯ ಪುನರ್ ರಚನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾಧ್ಯಕ್ಷರು ಶಿಸ್ತು ಕ್ರಮ ಜರುಗಿಸುವುದಾಗಿ ಹೇಳಿದರು.

ಡಿ.ಸಿ.ಸಿ ಕಾರ್ಯದರ್ಶಿಗಳಾದ ವಿ.ಕೆ.ಸತೀಶ್, ಕೆ.ಪಿ.ಸಿ.ಸಿ ಕಿಸಾನ್ ಘಟಕದ ಪ್ರಧಾನ ಕಾರ್ಯದÀರ್ಶಿಗಳಾದ ಗೋಪಾಲಕೃಷ್ಣ, ಹಿರಿಯ ಕಾಂಗ್ರೆಸಿಗರಾದ ಪೊರೇರ ಬಿದ್ದಪ್ಪ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ರಾಜೀವ್ ಗಾಂಧಿ ಅವರ ೩೧ ನೇ ಪುಣ್ಯತಿಥಿ ಅಂಗವಾಗಿ ಪಕ್ಷದ ವತಿಯಿಂದ ಒಂದು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಸಂತಾಪ ಸೂಚಿಸಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಸೇವಾದಳ ಜಿಲ್ಲಾ ಮಾಜಿ ಅಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ, ಹಿರಿಯರಾದ ಬೆಲ್ಲು ಬೋಪಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೊಳುಮಂಡ ರಫೀಕ್ ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳು, ವಲಯ ಅಧ್ಯಕ್ಷರು ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ನಗರ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.