ವೀರಾಜಪೇಟೆ, ಮೇ ೨೪: ಆಟೋ ಚಲಾಯಿಸಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆ ಹೊಂದಿ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುಕೋಟೆ ಗ್ರಾಮದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆಕೊಪ್ಪಲು (ಪುದುಕೋಟೆ) ನಿವಾಸಿ ದಿ. ವಿಠಲ ಎಂಬವರ ಪುತ್ರ ಆಟೋ ಚಾಲಕ ಬಿ..ವಿ ಸತೀಶ್ (೪೫) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಶವ ಪರೀಕ್ಷೆ ಮಾಡಿಸಿ ಸಂಬAಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.