ಮಡಿಕೇರಿ, ಮೇ ೨೪ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ದಿನ ಕಳೆದಂತೆ ಒಂದಲ್ಲಾ ಒಂದು ಹಗರಣಗಳಲ್ಲಿ ಸಿಲುಕಿಕೊಳ್ಳುತ್ತಿದ್ದು, ಹಗರಣಗಳನ್ನು ಮರೆಮಾಚಲು ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ದಿಕ್ಕುತಪ್ಪಿಸುತ್ತಿದೆ ಎಂದು ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಕೊಂಬಾರನ ರೋಷನ್ ಗಣಪತಿ ಮಾತನಾಡಿ, ಪೊನ್ನಂಪೇಟೆಯಲ್ಲಿ ನಡೆದ ಘಟನೆ, ಶೇ.೪೦ ಕಮಿಷನ್ ಹಗರಣ, ಪಿಎಸ್ಐ ಹಗರಣ, ಲ್ಯಾಪ್ ಟಾಪ್ ಹಗರಣದ ಕುರಿತು ಪಾರದರ್ಶಕವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇನ್ನಾದರೂ ಮುಗ್ಧ ಮನಸ್ಸಿನ ವಿದ್ಯಾರ್ಥಿಗಳಲ್ಲಿ ಕೋಮು ಮನಸ್ಥಿತಿ ಬೆಳೆಸದೆ ಅವರ ವಿದ್ಯಾಭ್ಯಾಸ, ನಾಯಕತ್ವ, ಕ್ರೀಡೆ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ರಾಷ್ಟಿçÃಯ ವಿದ್ಯಾರ್ಥಿ ಒಕ್ಕೂಟವು ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸ್ಪಂದಿಸಲು ಸದಾ ಸಿದ್ಧವಿದ್ದು, ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಂಕಷ್ಟಗಳನ್ನು ಬಗೆ ಹರಿಸುವ ಕೆಲಸ ಮಾಡುತ್ತದೆ. ಅಲ್ಲದೆ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದರು.
ಧರ್ಮ ರಾಜಕೀಯವು ಕೇವಲ ರಾಜಕಾರಣಕ್ಕೆ ಸೀಮಿತವಾಗದೇ ಶೈಕ್ಷಣಿಕ ಪಠ್ಯ ಪುಸ್ತಕಗಳಲ್ಲಿ ಬಳಸುತ್ತಿರುವುದು ಖಂಡನೀಯ ಎಂದು ಆಕ್ಷೇಪ ವ್ಯಕ್ತಪಡಿಸಿದ ಅವರು, ನಗರದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರö್ಯ ಹೋರಾಟಗಾರ, ಸಾಧಕರ, ಆದರ್ಶ ವ್ಯಕ್ತಿತ್ವ ಹೊಂದಿದವರ ಬಗ್ಗೆ ಬೋಧಿಸಬೇಕೇ ಹೊರತು ರಾಜಕೀಯ ಲಾಭಕ್ಕಾಗಿ ಧರ್ಮಗಳ ವಿಷಬೀಜ ಹಾಕಬಾರದು ಎಂದರು.
ರಾಜ್ಯ ಸರ್ಕಾರ ಕೂಡಲೇ ಶಿಕ್ಷಣ ತಜ್ಞರೊಂದಿಗೆ, ಸಾಹಿತಿಗಳೊಂದಿಗೆ ಹಾಗೂ ಚಿಂತಕರೊAದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಮುದ್ರಣದ ಕರಡನ್ನು ತಕ್ಷಣ ವಾಪಸ್ಸು ಪಡೆದು ನಾಡಿನ ಚಿಂತಕರ ಹಾಗೂ ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಕಾರ್ಯದರ್ಶಿ ಮೈಕಲ್ ಮಾರ್ಷಲ್, ಕಾನೂನು ಘಟಕದ ಸದಸ್ಯ ಬಿ.ಎಂ.ಸೋಮಣ್ಣ, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮುಂಡAಡ ಸುದೈ ನಾಣಯ್ಯ, ಪದಾಧಿಕಾರಿಗಳಾದ ಹ್ಯಾರಿಸ್ ಸುಂಟಿಕೊಪ್ಪ, ಸಂತೋಷ್ ಕುಮಾರ್ ಹಾಜರಿದ್ದರು.