ದಾವೋಸ್ ಶೃಂಗಸಭೆ - ರಾಜ್ಯದಲ್ಲಿ

೫೦,೦೦೦ ಕೋಟಿ ಹೂಡಿಕೆ ಒಪ್ಪಂದಕ್ಕೆ ಸಹಿ

ಬೆಂಗಳೂರು, ಮೇ ೨೪: ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿವಿಧ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರ್ತಿ ಎಂಟರ್ ಪ್ರೆöÊಸಸ್ ನ ಸಿಇಒ ಸುನೀಲ್ ಭಾರ್ತಿ ಮಿತ್ತಲ್ ಮತ್ತಿತರನ್ನು ಭೇಟಿಯಾದ ಮುಖ್ಯಮಂತ್ರಿ, ರಾಜ್ಯದಲ್ಲಿನ ಹೂಡಿಕೆ ಅವಕಾಶ ಕುರಿತಂತೆ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೆöÊ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ ೫೦,೦೦೦ ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿತು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ ಸಚಿವ ಡಾ.ಸಿ. ಎನ್. ಅಶ್ವತ್ಥ ನಾರಾಯಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರ್ತಿ ಎಂಟರ್ ಪ್ರೆöÊಸಸ್ ರಾಜ್ಯದಲ್ಲಿ ಮೆಗಾ ಡಾಟಾ ಸೆಂಟರ್ ಸ್ಥಾಪನೆಗೆ ಯೋಜಿಸಿದ್ದು, ಸರ್ಕಾರದಿಂದ ಸಂಪೂರ್ಣ ಸಹಕಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಶ್ರೀನಗರದಲ್ಲಿ ಪೊಲೀಸ್ ಪೇದೆ ಗುಂಡಿಕ್ಕಿ ಹತ್ಯೆ

ಶ್ರೀನಗರ, ಮೇ ೨೪: ಶ್ರೀನಗರದ ಹೊರವಲಯದ ಸೌರಾದಲ್ಲಿ ತಮ್ಮ ಮನೆಯ ಹೊರಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಉಗ್ರರು ಮನಬಂದAತೆ ಗುಂಡು ಹಾರಿಸಿದ್ದು, ಗುಂಡಿನ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಅವರ ಏಳು ವರ್ಷದ ಮಗಳು ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರದಲ್ಲಿ ಈ ತಿಂಗಳು ಉಗ್ರರಿಂದ ಹತ್ಯೆಗೀಡಾದ ಮೂರನೇ ಪೊಲೀಸ್ ಪೇದೆಯಾಗಿದ್ದಾರೆ. ಕಾನ್ಸ್ಟೇಬಲ್ ಸೈಫುಲ್ಲಾ ಖಾದ್ರಿ ಅವರು ಇಂದು ತಮ್ಮ ಮಗಳನ್ನು ಟ್ಯೂಷನ್‌ಗೆ ಬಿಡಲು ಮನೆಯಿಂದ ಹೊರಗೆ ಬರುತ್ತಿದ್ದಂತೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪುಲ್ವಾಮಾದಲ್ಲಿ ಭಯೋತ್ಪಾದನಾ ಘಟಕ ಭೇದಿಸಿದ ಭಾರತೀಯ ಸೇನೆ

ಶ್ರೀನಗರ, ಮೇ ೨೪: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಘಟಕವನ್ನು ಭೇದಿಸಿದ್ದು, ಎಂಟು ಉಗ್ರಗಾಮಿ ಸಹಚರರನ್ನು ಬಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ, ಹಲವಾರು ಶಂಕಿತರ ಚಲನವಲನ ಮೇಲೆ ಕಣ್ಣಿಡಲಾಗಿತ್ತು. ಇದರ ಪರಿಣಾಮವಾಗಿ ದಕ್ಷಿಣ ಕಾಶ್ಮೀರ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದನಾ ಘಟಕವನ್ನು ಭೇದಿಸಲಾಯಿತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಬಂದಿತರನ್ನು ಮುಷ್ತಾಕ್ ಅಹ್ಮದ್ ದಾರ್, ಇಶ್ಫಾಕ್ ಅಹ್ಮದ್ ದಾರ್, ಮಂಜೂರ್ ಅಹ್ಮದ್ ದಾರ್, ಫಯಾಜ್ ಅಹ್ಮದ್ ರಾಥರ್, ಶಬೀರ್ ಅಹ್ಮದ್, ಮೊಹಮ್ಮದ್ ಲತೀಫ್, ಶೀರಾಜ್ ಅಹ್ಮದ್ ಮಿರ್ ಮತ್ತು ವಸೀಮ್ ಅಹ್ಮದ್ ಭಟ್. ಬಂದಿತರಿAದ ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಅಪರಾಧ ಕೃತ್ಯಕ್ಕೆ ಬಳಸಿದ್ದ ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಬಂಧಿತ ಭಯೋತ್ಪಾದಕ ಸಹಚರರು ಇಬ್ಬರು ಸಕ್ರಿಯ ಜೆಇಎಂ ಭಯೋತ್ಪಾದಕರಾದ ಮೊಂಗಮಾ ನಿವಾಸಿ ಆಸಿಫ್ ಶೇಖ್ ಮತ್ತು ಸೈದಾಬಾದ್ ಪಸ್ತೂನಾ ತ್ರಾಲ್ ನಿವಾಸಿ ಅಜಾಜ್ ಭಟ್ ಅವರಿಗೆ ಆಶ್ರಯ, ಲಾಜಿಸ್ಟಿಕ್ಸ್ ಮತ್ತು ಶಸ್ತಾçಸ್ತç, ಮದ್ದುಗುಂಡುಗಳ ಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.