ಮಡಿಕೇರಿ, ಮೇ ೨೪ : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ, ೨೬ ರಂದು ಸೋಮವಾರಪೇಟೆ ತಹಶೀಲ್ದಾರ್ ಅವರ ಕಚೇರಿಯಲ್ಲಿ, ಮೇ ೨೭ ರಂದು ವಿರಾಜಪೇಟೆ ತಹಶೀಲ್ದಾರ್ ಅವರ ಕಚೇರಿಯಲ್ಲಿ ಮತ್ತು ಮೇ, ೩೦ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿಯಲ್ಲಿ ಆಯಾಯ ದಿನಗಳಂದು ಬೆಳಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸ ಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.