ಮಡಿಕೇರಿ, ಮೇ ೨೪: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆಗಳ ಆಶ್ರಯದಲ್ಲಿ ಕಾಸರಗೋಡಿನಲ್ಲಿ ನಡೆದ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಯನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಪಡೆದುಕೊಂಡರು.
ಸಾAಸ್ಕೃತಿಕ ಸಾಧಕರಾದ ಪ್ರಭಾಕರ ಕಲ್ಲೂರಾಯ ಬನದಗದ್ದೆ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಯನ್ನು ಸವಿತಾ ರೈ ಅವರಿಗೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಪ್ರದಾನ ಮಾಡಿದರು.
ಈ ಸಂದರ್ಭ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ, ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಎ.ಆರ್. ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ರಾಜ್ಯ ಪ್ರದಾನ ಕಾರ್ಯದರ್ಶಿ ಸಿ.ಜೆ. ಲೋಕೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.