ಕೂಡಿಗೆ, ಮೇ ೨೫: ಜನಸಂಖ್ಯಾ ಸ್ಫೋಟ ಹಾಗೂ ಅರಣ್ಯ ಮತ್ತು ಪರಿಸರದ ಮೇಲೆ ಮಾನವನಿಂದ ಉಂಟಾಗುತ್ತಿರುವ ದಬ್ಬಾಳಿಕೆಯಿಂದ ಅನೇಕ ಜೀವ ಪ್ರಭೇದಗಳು ಅಳಿವಿ ನಂಚಿನಲ್ಲಿದ್ದು, ಭವಿಷ್ಯದ ದೃಷ್ಠಿಯಿಂದ ಅವುಗಳ ಉಳಿವಿಗಾಗಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಕುಶಾಲನಗರ ಸರ್ಕಾರಿ ಇಂಜಿನಿಯ ರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸೀನಪ್ಪ ಹೇಳಿದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ, ಜಿಲ್ಲಾ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ಘಟಕ, ಶಾಲೆಯ ಇಕೋ ಕ್ಲಬ್, ಎಸ್.ಡಿ.ಎಂ.ಸಿ. ಮತ್ತು ಎನ್.ಎಸ್. ಎಸ್. ಘಟಕ ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರ್ ಕಾಲೇಜಿನ ಎ.ಐ.ಸಿ.ಟಿ.ಇ. ಚಟುವಟಿಕೆಯ ಶ್ರೇಯಾಂಕ ಯೋಜನೆಯಡಿ ವಿದ್ಯಾರ್ಥಿ ಬಳಗದ ವತಿಯಿಂದ ವಿಶ್ವ ಜೀವವೈವಿಧ್ಯ ದಿನಾಚರಣೆ ಅಂಗವಾಗಿ ಜೀವವೈವಿಧ್ಯ ಸಂರಕ್ಷಣೆ ಕುರಿತು ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದರು.

ಮನುಷ್ಯನ ಅತಿಯಾದ ಅಭಿವೃದ್ಧಿಪರ ಚಟುವಟಿಕೆಗಳು, ಇದರಿಂದ ಹವಾಮಾನದಲ್ಲಾಗುತ್ತಿರುವ ವ್ಯತ್ಯಾಸ, ಅಭಯಾರಣ್ಯ ಮತ್ತು ರಕ್ಷಿತಾರಣ್ಯಗಳಲ್ಲಿ ಹೆಚ್ಚುತ್ತಿರುವ ವಾಹನ ಸಂಚಾರ ಇವೇ ಮೊದಲಾದವುಗಳು ಅಪರೂಪದ ಜೀವವೈವಿಧ್ಯಗಳ ಸಾವಿಗೆ ಬಹುತೇಕ ಕಾರಣವಾಗಿವೆ ಎಂದರು. ವಿದ್ಯಾರ್ಥಿಗಳು ತಮ್ಮ ಶಾಲಾ ಕಾಲೇಜಿನಲ್ಲಿ ನಡೆಯುವ ಪರಿಸರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಡಾ. ಸೀನಪ್ಪ ಹೇಳಿದರು.

ಜೀವವೈವಿಧ್ಯ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡುವ ಮೂಲಕ ಜೀವವೈವಿಧ್ಯ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ಘಟಕದ ನೋಡಲ್ ಅಧಿಕಾರಿಯೂ ಆದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು.

ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಸಂಪನ್ಮೂಲ ವ್ಯಕ್ತಿ ಜಿ. ಶ್ರೀನಾಥ್ ಜೀವ ವೈವಿಧ್ಯ ಸಂರಕ್ಷಣೆಯಲ್ಲಿ ಮಾನವನ ಪಾತ್ರ ಕುರಿತು ತಿಳಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ, ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಶಾಲಾ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ, ಎಸ್.ಎಂ. ಗೀತಾ, ಇಂಜಿನಿಯರಿAಗ್ ಕಾಲೇಜಿನ ವಿದ್ಯಾರ್ಥಿ ಮುಖಂಡರಾದ ಎಂ.ಎಸ್. ಧನುಶ್ರೀ, ಎಸ್.ಐ. ಅಮೃತ, ಕೆ. ಬೃಂದ, ಎನ್. ನಾಗೇಂದ್ರ, ಬಿ.ಬಿ. ಆದಿತ್ಯ ಇತರರು ಇದ್ದರು. ನಂತರ ನಡೆದ ಪರಿಸರ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಜೀವ ವೈವಿಧ್ಯ ಸಂರಕ್ಷಣೆ ಕುರಿತ ಘೋಷಣಾ ಫಲಕಗಳನ್ನು ಹಿಡಿದು ಜನರಲ್ಲಿ ಜಾಗೃತಿ ಮೂಡಿಸಿದರು.