ಕೂಡಿಗೆ, ಮೇ ೨೫: ಕುಶಾಲನಗರ ತಾಲೂಕು ಮಟ್ಟದ ನೆರೆಹಾವಳಿಯ ಮುಂಜಾಗ್ರತಾ ಕ್ರಮವಾಗಿ ಹಾಗೂ ಈಗಾಗಲೇ ಮುಂಗಾರು ಮಳೆ ಆರಂಭ ಗೊಂಡಿರುವ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯ ಸಭಾಂಗಣದಲ್ಲಿ, ತಹಶೀಲ್ದಾರ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಸಭೆ ನಡೆಯಿತು.

ಸಭೆಯಲ್ಲಿ ಈಗಾಗಲೇ ಜಿಲ್ಲಾ ಮಟ್ಟದಿಂದ ನೇಮಕಗೊಂಡಿರುವ ಅಧಿಕಾರಿ ವರ್ಗದವರು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೆರೆಹಾವಳಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಬಗ್ಗೆ ಚರ್ಚೆಗಳು ನಡೆದವು.