ಮಡಿಕೇರಿ, ಮೇ ೨೫ : ಪ್ರಸಕ್ತ (೨೦೨೨-೨೩) ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಜಿಲ್ಲೆಯ ಎಲ್ಲಾ ೩ ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳು ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು.

ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು. ಈ ಯೋಜನೆಯ ವಿಮೆ ನೋಂದಣಿಗೆ ಜೂನ್ ೩೦ ಕೊನೆಯ ದಿನವಾಗಿದೆ.

೨೦೨೨-೨೩ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರ ಇಂತಿದೆ. ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ (ರೂ. ಗಳಲ್ಲಿ) ಕಾಳು ಮೆಣಸು ೪೭ ಸಾವಿರ, ಅಡಿಕೆಗೆ ರೂ.೧,೨೮,೦೦೦, ಪ್ರತಿ ಹೆಕ್ಟೇರ್‌ಗೆ ವಿಮಾ ಕಂತು (ಶೇ.೩೦) ಕಾಳು ಮೆಣಸಿಗೆ ೧೪,೧೦೦ ಮತ್ತು ಅಡಿಕೆಗೆ ೩೮,೪೦೦ ಹಾಗೂ ರೈತರು ಪಾವತಿಸಬೇಕಾಗಿರುವ ಕಂತು(ಶೇ.೫) ಕಾಳು ಮೆಣಸಿಗೆ ೨,೩೫೦ ಮತ್ತು ಅಡಿಕೆಗೆ ೬,೪೦೦ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ರೈತರು ಕೂಡಲೇ ಸಮೀಪದ ಬ್ಯಾಂಕ್ ಶಾಖೆ ಅಥವಾ ಎಸ್‌ಬಿಐ ಜನರಲ್ ಇನ್ಸೂರೆನ್ಸ್ (ಶುಲ್ಕ ರಹಿತ ಫೋನ್ ನಂ. ೧೮೦೦೨೦೯೧೧೧೧ ಆಥವಾ ಶರತ್ ೯೯೦೨೩೦೨೮೬೭) ಅಥವಾ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ಸಂಪರ್ಕಿಸುವAತೆ ತೋಟಗಾರಿಕೆ ಉಪ ನಿರ್ದೇಶಕ ಪ್ರಮೋದ್ ಕೋರಿದ್ದಾರೆ.