ಮಡಿಕೇರಿ, ಮೇ ೨೫: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ತಾ. ೩೧ ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ತಾ. ೨೪ ರಿಂದ ತಾ. ೩೧ ರವರೆಗೆ ತಂಬಾಕು ಮುಕ್ತ ಮಾಸಾಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾ. ೨೫ ರಂದು ಬಿಎಸ್‌ಡಬ್ಲೂö್ಯ ವಿದ್ಯಾರ್ಥಿಗಳೊಂದಿಗೆ ಸಿಗರೇಟ್ ತುಂಡುಗಳ ಸಂಗ್ರಹಣಾ ಅಭಿಯಾನ(ರಾಜಾಸೀಟು ಮತ್ತು ಕೋಟೆ ಆವರಣ), ತಾ. ೨೬ ರಂದು ತಂಬಾಕು-ಪರಿಸರಕ್ಕೆ ಮಾರಕ ಎಂಬ ವಿಷಯದ ಬಗ್ಗೆ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ, ತಾ. ೨೭ ರಂದು ಬಿಎಸ್‌ಡಬ್ಲೂö್ಯ ವಿದ್ಯಾರ್ಥಿಗಳೊಂದಿಗೆ ಸಿಗರೇಟ್ ತುಂಡುಗಳ ಸಂಗ್ರಹಣಾ ಅಭಿಯಾನ (ಗದ್ದುಗೆ, ಸರ್ಕಾರಿ ಬಸ್ಸು ನಿಲ್ದಾಣ ಮತ್ತು ಅಬ್ಬೀ ಫಾಲ್ಸ್), ಶಾಸಕರಿಂದ ವಿಶ್ವ ತಂಬಾಕು ರಹಿತ ದಿನಾಚರಣೆಯ ಕುರಿತು ಮಾಧ್ಯಮಗಳೊಂದಿಗೆ ಸಂವಹನ ಕಾರ್ಯಕ್ರಮ, ತಾ. ೩೦ ರಂದು ಜಿಲ್ಲಾಧಿಕಾರಿ, ಜಿ.ಪಂ.ಸಿಇಒ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವಿಶ್ವ ತಂಬಾಕು ರಹಿತ ದಿನಾಚರಣೆಯ ಕುರಿತು ಮಾಧ್ಯಮಗಳೊಂದಿಗೆ ಸಂವಹನ ಕಾರ್ಯಕ್ರಮ ಮತ್ತು ತಾ. ೩೧ ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ಜಾಥಾ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಅಭಿಯಾನದ ಪ್ರಶಂಸೆ ಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಅವರು ತಿಳಿಸಿದ್ದಾರೆ.