ಸುಂಟಿಕೊಪ್ಪ, ಮೇ ೨೫: ಇಲ್ಲಿಗೆ ಸಮೀಪದ ಕಂಬಿಬಾಣೆ ಗ್ರಾಮ ಪಂಚಾಯಿತಿಗೆ ಸೇರಿದ ಅತ್ತೂರುನಲ್ಲೂರು ಕಡ್ಲೆ ಮನೆ ಎಸ್ಟೇಟ್‌ನಲ್ಲಿ ಕಾಡಾನೆಗಳ ದಾಳಿಯಿಂದ ಅಪಾರ ಬೆಳೆ ನಷ್ಟವಾಗಿದೆ.

ಈ ಭಾಗದಲ್ಲಿ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕರಿಮೆಣಸು ಗಿಡಗಳನ್ನು ದ್ವಂಸಗೊಳಿಸಿ ಭಾರಿ ಪ್ರಮಾಣದಲ್ಲಿ ತೋಟದ ಮಾಲೀಕರಿಗೆ ನಷ್ಟಪಡಿಸಿವೆ. ಎಂದು ತೋಟದ ಮಾಲೀಕ ಶುಭಾಸ್ ಪೈ ಅಳಲು ತೋಡಿಕೊಂಡಿದ್ದಾರೆ.

ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು, ಕಾಫಿ, ಮೆಣಸು ಗಿಡಗಳನ್ನು ದ್ವಂಸಗೊಳಿಸಿದ್ದು, ಬಹಳಷ್ಟು ನಷ್ಟ ಸಂಭವಿಸಿದೆ ಎಂದಿದ್ದಾರೆ. ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ನಿರಂತರ ದಾಳಿ ನಡೆಸುವ ಕಾಡಾನೆಗಳು ರೋಬಸ್ಟಾ ಮತ್ತು ಅರೇಬಿಕಾ ಕಾಫಿ ಗಿಡಗಳನ್ನು ಧ್ವಂಸಗೊಳಿಸಿದೆ. ದಿನನಿತ್ಯ ಸುತ್ತಮುತ್ತಲಿನ ತೋಟಗಳಲ್ಲಿ ಹಗಲು ವೇಳೆಯಲ್ಲಿಯೇ ಆನೆಗಳು ಕಂಡುಬರುತ್ತಿದ್ದು, ಕೂಲಿ ಕಾರ್ಮಿಕರು ತೋಟದ ಕೆಲಸಕ್ಕೆ ಬರಲು ಅಂಜುತ್ತಿದ್ದು ಸಾರ್ವಜನಿಕರು ಮನೆಯಿಂದ ಹೊರ ಬರುವುದಕ್ಕೂ ಭಯ ಪಡುತ್ತಿದ್ದಾರೆ. ರಾತ್ರಿ ವೇಳೆ ಸುಂಟಿಕೊಪ್ಪದಿAದ ಈ ಭಾಗಕ್ಕೆ ಹಲವಾರು ವಾಹನಗಳು ಸಂಚರಿಸುತ್ತಿದ್ದು ಪ್ರಯಾಣಿಕರಿಗೆ ಆನೆ ಉಪಟಳದಿಂದ ತೊಂದರೆ ತಪ್ಪಿದಲ್ಲ ಕೂಡಲೇ ಅರಣ್ಯ ಅಧಿಕಾರಿಗಳು ಆನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.