ಸೋಮವಾರಪೇಟೆ, ಮೇ ೨೫: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ಜ್ಞಾನ ವಿಕಾಸ ಶಾಲೆಯ ಅಭಿವೃದ್ಧಿಗಾಗಿ ಶಾಸಕರ ನಿಧಿಯಿಂದ ರೂ. ೫ ಲಕ್ಷ ಅನುದಾನವನ್ನು ನೀಡುವುದಾಗಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಪಟ್ಟಣದ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೬೨೨ ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಪಿ.ಬಿ. ಸಿಂಚನಾ ಸೇರಿದಂತೆ ಅತ್ಯುತ್ತಮ ಅಂಕಗಳನ್ನು ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ಹೆಚ್ಚಿದ್ದು, ಕೊರೊನಾ ಬಂದ ನಂತರ ಶಾಲೆಯನ್ನು ಮುನ್ನಡೆಸಲು ಕಷ್ಟ ಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಶಾಲೆಯ ಅಭಿವೃದ್ಧಿಗಾಗಿ ಮುಖ್ಯೋಪಾಧ್ಯಾಯಿನಿ ಪಿ.ಕೆ.ಲಕ್ಷಿö್ಮ ಅವರು ಶಾಸಕರಲ್ಲಿ ಅನುದಾನ ನೀಡುವಂತೆ ಮನವಿ ಮಾಡಿದರು. ಮನವಿಗೆ ಕೂಡಲೇ ಸ್ಪಂದಿಸಿದ ಶಾಸಕರು ಅಗತ್ಯ ಸಹಾಯ ಮಾಡುವುದಾಗಿ ಘೋಷಿಸಿದರು.

ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಹಿರಿದಾದುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವುದರ ಜೊತೆಗೆ ಅವರನ್ನು ಸೂಕ್ಷö್ಮವಾಗಿ ಗಮನಿಸಿ, ತಪ್ಪನ್ನು ತಿದ್ದುವ ಕೆಲಸವನ್ನು ಅಗತ್ಯವಾಗಿ ಮಾಡಬೇಕಾಗಿದೆ ಎಂದು ಶಾಸಕರು ಸಲಹೆ ನೀಡಿದರು. ಸೋಮವಾರ ಪೇಟೆ ತಾಲೂಕಿನ ೨೪ ಶಾಲೆಗಳಲ್ಲಿ ಶೇ.೧೦೦ ಫಲಿತಾಂಶ ಬಂದಿದೆ. ಎಲ್ಲಾ ಅನುಕೂಲತೆಗಳನ್ನು ನೀಡಿದರೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಬಿದ್ದಿರುವುದು ಕಳವಳಕಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರು ಹೆಚ್ಚಿನ ಗಮನಹರಿಸ ಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭ ಪ್ರಥಮ ಸ್ಥಾನ ಪಡೆದ ಸಿಂಚನಾ, ೬೧೧ ಅಂಕ ಪಡೆದ ಶಮಂತ್ ಮತ್ತು ೬೦೧ ಅಂಕಗಳನ್ನು ಗಳಿಸಿದ ಪ್ರತೀಕ್ಷಾ ಅವರುಗಳನ್ನು ಶಾಸಕರು ಸನ್ಮಾನಿಸಿದರು. ಶಾಲಾ ಆಡಳಿತ ಮಂಡಳಿ ವತಿಯಿಂದ ೨ಗ್ರಾಂ ಚಿನ್ನದ ನಾಣ್ಯವನ್ನು ಸಿಂಚನಾಗೆ ನೀಡಿ ಗೌರವಿಸಲಾಯಿತು. ಉಳಿದ ಇಬ್ಬರು ವಿದ್ಯಾರ್ಥಿಗಳಿಗೆ ಬೆಳ್ಳಿ ನಾಣ್ಯವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಜಿಪಂ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಚAದ್ರಾಜು, ಕಾರ್ಯದರ್ಶಿ ವೆಂಕಟೇಶ್, ಸ್ಥಾಪಕ ಅಧ್ಯಕ್ಷ ಎ.ಪಿ.ಶಂಕರಪ್ಪ, ಮಾಜಿ ಕಾರ್ಯದರ್ಶಿ ಡಾ.ವಸಂತ್, ಆಡಳಿತ ಮಂಡಳಿ ಸದಸ್ಯರುಗಳಾದ ಗಜೇಂದ್ರ, ಗಣಪತಿ, ಮಹೇಶ್, ಶಾಲಾ ಮುಖ್ಯೋಪಾಧ್ಯಾಯಿನಿ ಪಿ.ಕೆ. ಲಕ್ಷಿö್ಮ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.