ಮಡಿಕೇರಿ, ಮೇ ೨೫: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ೭೨ ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಯೋಜನೆಯಡಿ ಕುಟುಂಬದ ವಾರ್ಷಿಕ ಆದಾಯ ೩೨ ಸಾವಿರ ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಛೇದಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ದೂರವಾಣಿ ಮುಖಾಂತರ ಕೋರಿಕೆ ಸಲ್ಲಿಸಬಹುದಾಗಿದೆ.

ಕಂದಾಯ ಸಚಿವರ ಸಹಾಯವಾಣಿ ಸಂಖ್ಯೆ ೧೫೫೨೪೫ ಗೆ ನಾಗರಿಕರು ಉಚಿತವಾಗಿ ದೂರವಾಣಿ ಕರೆ ಮೂಲಕ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು. ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಿಗರು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ “ನವೋದಯ” ಮೊಬೈಲ್ ಆ್ಯಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಪಡೆದು ಅರ್ಹರಿಗೆ ೭೨ ಗಂಟೆಯೊಳಗೆ ನಾಡ ಕಚೇರಿ ಉಪ ತಹಶೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದಿಸಿ ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶವನ್ನು ವಿತರಣೆ ಮಾಡಲಾಗುವುದು. ಗ್ರಾಮ ಲೆಕ್ಕಿಗರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕೆಳಕಂಡ ದಾಖಲೆಗಳ ಮಾಹಿತಿಯನ್ನು ನೀಡಬೇಕಾಗಿರುತ್ತದೆ.

ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್/ಅAಚೆ ಖಾತೆ ವಿವರದ ಪ್ರತಿ, ವಿಳಾಸ ಮತ್ತು ವಯಸ್ಸಿಗೆ ಸಂಬAಧಿಸಿದ ದಾಖಲಾತಿ(ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ), ಮೊಬೈಲ್ ಆ್ಯಪ್ ಮೂಲಕ ಭಾವ ಚಿತ್ರ ಸೆರೆ ಹಿಡಿಯಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ತಿಳಿಸಿದ್ದಾರೆ.