ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ

ನವದೆಹಲಿ, ಮೇ ೨೫: ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಎನ್‌ಐಎ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ ೧೦ ಲಕ್ಷ ರೂಪಾಯಿ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಎನ್‌ಐಎ ಕೋರ್ಟ್ ಮೇ ೧೯ ರಂದು ಯಾಸಿನ್ ಮಲಿಕ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್ ಉಗ್ರರಿಗೆ ಆರ್ಥಿಕ ನೆರವು ನೀಡಿದ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ ಹಾಗೂ ೧೦ ಲಕ್ಷ ರೂಪಾಯಿ ದಂಡ ವಿಧಿಸಿದೆ. ಇದಕ್ಕು ಮುನ್ನ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸುವಂತೆ ರಾಷ್ಟಿçÃಯ ತನಿಖಾ ಆಯೋಗ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನ್ಯಾಯಾಲಯ ನೇಮಿಸಿದ ಅಮಿಕಸ್ ಕ್ಯೂರಿ, ಕನಿಷ್ಟ ಶಿಕ್ಷೆಯಾದ ಜೀವಾವಧಿ ಶಿಕ್ಷೆಯನ್ನು ನೀಡುವಂತೆ ಕೋರಿದರು. ಈ ಮಧ್ಯೆ, ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಬಿಡುತ್ತಿದ್ದೇನೆ ಎಂದು ಮಲಿಕ್ ನ್ಯಾಯಾಧೀಶರಿಗೆ ತಿಳಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಅಂತಿಮವಾಗಿ ಜೀವಾವಧಿ ಶಿಕ್ಷೆ ನೀಡಿದೆ. ಬುರ್ಹಾನ್ ವಾನಿ ಎನ್‌ಕೌಂಟರ್ ಆದ ೩೦ ನಿಮಿಷಗಳಲ್ಲಿ ನನ್ನನ್ನು ಬಂಧಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಪಾಸ್‌ಪೋರ್ಟ್ ಮಂಜೂರು ಮಾಡಿದರು ಮತ್ತು ನಾನು ಕ್ರಿಮಿನಲ್ ಅಲ್ಲದ ಕಾರಣ ಹೇಳಿಕೆ ನೀಡಲು ಭಾರತ ನನಗೆ ಅವಕಾಶ ಮಾಡಿಕೊಟ್ಟಿತು ಎಂದು ಯಾಸಿನ್ ಮಲಿಕ್ ನ್ಯಾಯಾಲಯದಲ್ಲಿ ಹೇಳಿದರು. ೧೯೯೪ ರಲ್ಲಿ ಶಸ್ತಾçಸ್ತç ತ್ಯಜಿಸಿದಾಗಿನಿಂದ ತಾನು ಮಹಾತ್ಮ ಗಾಂಧಿಯವರ ತತ್ವಗಳನ್ನು ಅನುಸರಿಸುತ್ತಿದ್ದೇನೆ. ಅಂದಿನಿAದ ನಾನು ಕಾಶ್ಮೀರದಲ್ಲಿ ಅಹಿಂಸಾತ್ಮಕ ರಾಜಕೀಯವನ್ನು ಮಾಡುತ್ತಿದ್ದೇನೆ. ಏಳು ಪ್ರಧಾನಿಗಳೊಂದಿಗೆ ಕೆಲಸ ಮಾಡಿದ್ದೇನೆ ಎಂದು ಹೇಳಿಕೊಂಡ ಮಲಿಕ್, ಕಳೆದ ೨೮ ವರ್ಷಗಳಲ್ಲಿ ಯಾವುದೇ ಭಯೋತ್ಪಾದನಾ ಚಟುವಟಿಕೆಗಳು ಅಥವಾ ಹಿಂಸಾಚಾರದಲ್ಲಿ ಭಾಗಿಯಾಗಿದ್ದರೆ ಅದನ್ನು ತೋರಿಸಲಿ ಎಂದು ಭಾರತೀಯ ಗುಪ್ತಚರ ಸಂಸ್ಥೆಗಳಿಗೆ ಸವಾಲು ಹಾಕಿದರು. ಒಂದು ವೇಳೆ ಆರೋಪ ಸಾಬೀತಾದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಮತ್ತು ಮರಣದಂಡನೆಯನ್ನು ಸ್ವೀಕರಿಸುತ್ತೇನೆ ಎಂದು ಹೇಳಿದರು. ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನ ಶ್ರೀನಗರದ ಕೆಲವು ಭಾಗಗಳಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿತ್ತು. ನಗರದ ಕೆಲವು ಭಾಗಗಳಲ್ಲಿ ಅಂಗಡಿಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಂದ್ ಆಗಿದ್ದವು. ಆದಾಗ್ಯೂ, ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ವಾಹನಗಳು ಎಂದಿನAತೆ ಕಾರ್ಯನಿರ್ವಹಿಸಿದವು. ಶ್ರೀನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು-ಸುವ್ಯವಸ್ಥೆ ಹದಗೆಡದಂತೆ ಪರಿಸ್ಥಿತಿಯನ್ನು ನಿಭಾಯಿಸಿಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಲಾಹೋರ್‌ನ ಎಟಿಎಂಗಳಲ್ಲಿ ಹಣವಿಲ್ಲ: ಬಂಕ್‌ಗಳಲ್ಲಿ ಪೆಟ್ರೋಲ್ ಇಲ್ಲ

ಇಸ್ಲಾಮಾಬಾದ್, ಮೇ ೨೫: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಪಾಕ್‌ನಲ್ಲಿನ ಆರ್ಥಿಕ ಸಂಕಷ್ಟದ ಸ್ಥಿತಿಯಿಂದ ಸಾಮಾನ್ಯ ವ್ಯಕ್ತಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಟ್ವಿಟರ್‌ನಲ್ಲಿ ಪ್ರಶ್ನಿಸಿ, ರಾಜಕಾರಣಿಗಳ ವಿರುದ್ಧ ಕಿಡಿಕಾರಿದ್ದಾರೆ. ಲಾಹೋರ್‌ನ ಯಾವುದೇ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂ ಯಂತ್ರಗಳಲ್ಲಿ ನಗದು ಲಭ್ಯವಿಲ್ಲವೇ? ಸಾಮಾನ್ಯ ಜನರು ರಾಜಕೀಯ ನಿರ್ಧಾರಗಳಿಂದ ಏಕೆ ಬಳಲುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಟ್ವಿಟರ್‌ನಲ್ಲಿ ಬರೆದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಟ್ಯಾಗ್ ಮಾಡಿದ್ದಾರೆ. ಇತರ ರಾಜಕಾರಣಿಗಳಲ್ಲಿ ಪ್ರಸ್ತುತ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಮಾಜಿ ಪ್ರಧಾನಿ ನವಾಜ್ ಷರೀಫ್ ಪುತ್ರಿ ಮರ್ಯಮ್ ನವಾಜ್, ವಿದೇಶಾಂಗ ಸಚಿವ ಬಿಲಾವಲ್ ಬುಟ್ಟೋ ಜರ್ದಾರಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸಿದ ನಂತರ ಶೆಹಬಾಜ್ ಷರೀಫ್ ಈ ವರ್ಷದ ಏಪ್ರಿಲ್‌ನಲ್ಲಿ ಪಾಕಿಸ್ತಾನದ ೨೩ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮೊಹಮ್ಮದ್ ಹಫೀಜ್ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದರು ಮತ್ತು ಅವರು ೨೦೧೭ ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಅಂರ‍್ರಾಷ್ಟಿçÃಯ ವೃತ್ತಿಜೀವನವನ್ನು ಹೊಂದಿದರು. ಹಫೀಜ್ ಎಲ್ಲಾ ಮೂರು ಸ್ವರೂಪಗಳಲ್ಲಿ ಅಂರ‍್ರಾಷ್ಟಿçÃಯ ಕ್ರಿಕೆಟ್‌ನಲ್ಲಿ ೧೨,೦೦೦ಕ್ಕೂ ಹೆಚ್ಚು ರನ್ ಗಳಿಸಿದರು ಮತ್ತು ೨೫೦ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದರು. ಅವರು ಪಾಕಿಸ್ತಾನ ತಂಡದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು.

ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಹೂಡಿಕೆಯ ಆಕರ್ಷಣೆಯ ಕೇಂದ್ರ

ಬೆAಗಳೂರು, ಮೇ ೨೫: ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಡಿ ಕರ್ನಾಟಕ ವಿಶ್ವದಾದ್ಯಂತ ಬಂಡವಾಳ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಐಟಿ ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಮುಂದಿನ ತಿಂಗಳು ಬೆಂಗಳೂರಿನ ನಾಗಸಂದ್ರದಲ್ಲಿ ಐಕಿಯ ಇಂಡಿಯಾ ತನ್ನ ಸ್ಟೋರ್‌ನ್ನು ತೆರೆಯಲಿದೆ. ಇದರಿಂದ ಉದ್ಯೋಗ ಮತ್ತು ಆರ್ಥಿಕ ಪ್ರಗತಿಗೆ ಅವಕಾಶವಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಆಕ್ಸಿಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಮಿತ್ ಚೌಧರಿ ಜೊತೆಗಿನ ಸಭೆ ಫಲಪ್ರದವಾಗಿದೆ. ಕೋವಿಡ್ ನಂತರದ ಪರಿಸ್ಥಿತಿ, ಡಿಜಿಟಲ್ ವ್ಯವಹಾರದಿಂದ ಎದುರಾಗಿರುವ ಸವಾಲುಗಳು ಮತ್ತು ರಾಜ್ಯದಲ್ಲಿ ವ್ಯವಹಾರ ವಿಸ್ತರಣೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂದಿಸಲು ಪಾಕಿಸ್ತಾನ ನಿರ್ಧಾರ

ಇಸ್ಲಾಮಾಬಾದ್, ಮೇ ೨೫: ಪಾಕಿಸ್ತಾನದ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲುಂಡ ಬಳಿಕ ಮಾಜಿ ಪ್ರಧಾನಿ ಇಮ್ರಾನ್ ಖಾನ್, ನೂತನ ಸರಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ನೂತನ ಪ್ರಧಾನಿ ಶಹಬಾಜ್ ಷರೀಫ್ ನೇತೃತ್ವದ ಸರಕಾರವನ್ನು ಇಂಪೋರ್ಟೆಡ್ ಸರಕಾರ ಎಂದು ಜರಿಯುತ್ತಿರುವ ಇಮ್ರಾನ್ ಖಾನ್, ತನ್ನ ಸೋಲಿಗೆ ಅಮೆರಿಕದ ಕೈವಾಡವೇ ಕಾರಣ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ಸರಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿರುವ ಇಮ್ರಾನ್ ಖಾನ್, ಲಾಂಗ್ ಮಾರ್ಚ್ ಪ್ರಾರಂಭ ಮಾಡಿದ್ದಾರೆ. ಈ ರ‍್ಯಾಲಿಯಲ್ಲಿ ಭಾಗವಹಿಸಲು ಪೇಶಾವರದಿಂದ ಇಸ್ಲಾಮಾಬಾದ್‌ಗೆ ತೆರಳುತ್ತಿರುವ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಪಕ್ಷದ ಇತರ ಪ್ರಮುಖ ನಾಯಕರನ್ನು ಬಂದಿಸಲು ಪಾಕಿಸ್ತಾನ ಸರಕಾರ ನಿರ್ಧರಿಸಿದೆ. ದಿ ನ್ಯೂಸ್ ಪ್ರಕಾರ, ವಿವಿಧ ಏಜೆನ್ಸಿಗಳೊಂದಿಗೆ ಅಧಿಕಾರಿಗಳು ವಿವರವಾದ ಸಭೆ ನಡೆಸಿದ್ದು, ಇಮ್ರಾನ್ ಖಾನ್ ಹಾಗೂ ಆ ಪಕ್ಷದ ಇತರ ಪ್ರಮುಖ ನಾಯಕರನ್ನು ವಶಕ್ಕೆ ತೆಗೆದುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಲಾಂಗ್ ಮಾರ್ಚ್ನಲ್ಲಿ ಅವರನ್ನು ಬಂದಿಸುವುದು ಅಸಾಧ್ಯವಾದ ಕೆಲಸವೆಂದು ತೋರುತ್ತಿರುವಾಗ ಸಂಭವನೀಯ ಹಿಂಸಾಚಾರವನ್ನು ತಡೆಯಲು ಅವರನ್ನು ಬಂದಿಸುವುದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಗುಪ್ತಚರ ಸಂಸ್ಥೆಗಳ ಮಾಹಿತಿಯ ಪ್ರಕಾರ, ಪಿಟಿಐ ಕಾರ್ಯಕರ್ತರು ಕಾನೂನು ಜಾರಿ ಸಂಸ್ಥೆಗಳಿAದ ಯಾವುದೇ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ಮುಖಾಮುಖಿ ಆಗುವ ಸಾಧ್ಯತೆ ಇದೆ ಎಂಬುದು ಸರ್ಕಾರಿ ಸಂಸ್ಥೆಗಳಿಗೆ ಚೆನ್ನಾಗಿ ತಿಳಿದಿದೆ. ಅದನ್ನು ತಪ್ಪಿಸಲು ಕಷ್ಟವಾಗಲಿದೆ ಎಂಬ ವಿಚಾರವನ್ನು ಅಧಿಕಾರಿಗಳು ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.