ಮಡಿಕೇರಿ, ಮೇ ೨೬: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಗೋಣಿಕೊಪ್ಪ ಕಾವೇರಿ ಕಾಲೇಜು ಇವರ ಸಹಯೋಗದಲ್ಲಿ ಪದವಿಮಟ್ಟದ ಕೊಡವ ಪಾಜೆ ವಿಶೇಷ ಉಪನ್ಯಾಸ ಮತ್ತು ಪುಸ್ತಕ ಬೊಳಿಪಡ್‌ತ್‌ವ ಕಾರ್ಯಕ್ರಮವು ತಾ. ೨೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಚಿರಿಯಪಂಡ ಕೆ. ಉತ್ತಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿಯ ನಿರ್ದೇಶಕ ಇಟ್ಟಿರ ಕೆ. ಬಿದ್ದಪ್ಪ, ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಮಾಳೇಟಿರ ಬಿ. ಕಾವೇರಪ್ಪ ಅವರು ಪಾಲ್ಗೊಳ್ಳಲಿದ್ದಾರೆ.

ಗೋಣಿಕೊಪ್ಪ ಕಾವೇರಿ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಡಾ. ತೀತಿಮಾಡ ಪೂವಯ್ಯ ಅವರು ಪದವಿ ಮಟ್ಟತ್ ಕೊಡವ ಪಾಜೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಜೊತೆಗೆ ಉಳುವಂಗಡ ಕಾವೇರಿ ಉದಯ ಇವರು ಬರೆದಿರುವ ಮನತುದ್‌ಚ ಮುತ್ತ್, ಡಾ.ಎಂ.ಪಿ.ರೇಖಾ ಅವರು ಬರೆದಿರುವ ಕೊಡವ ರಂಗಭೂಮಿ ಹಾಗೂ ಬಡಕಡಮ್ಮಂಡ ಕಸ್ತೂರಿ ಗೋವಿಂದಮ್ಮಯ್ಯ ಅವರು ಬರೆದಿರುವ ಗೆಜ್ಜೆರ ಸದ್ದ್ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ. ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಅವರು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅಕಾಡೆಮಿ ಪ್ರಕಟಿತ ಪುಸ್ತಕಗಳು ಹಾಗೂ ಸಿ.ಡಿ.ಗಳ ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮವು ಕೋವಿಡ್ ನಿಯಮಾನುಸಾರ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಕಾವೇರಿ ಕಾಲೇಜಿನ ಕೊಡವ ಭಾಷೆಯನ್ನು ಎರಡನೇ ಭಾಷೆಯಾಗಿ ಆಯ್ಕೆ ಮಾಡಿದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.