ಕೂಡಿಗೆ, ಮೇ ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಮಾರಿಯಮ್ಮ ದೇವಿಯ ವಾರ್ಷಿಕ ಪೂಜೋತ್ಸವ ಕಾರ್ಯಕ್ರಮ ವಿಶೇಷ ಹೋಮ ಹವನಗಳ ಮೂಲಕ ನಡೆಯಿತು.
ಮಾರಿಯಮ್ಮ ದೇವಿಯ ಪೂಜೋತ್ಸವದ ಅಂಗವಾಗಿ ದೇವಾಲಯ ಅವರಣದಲ್ಲಿ ಎರಡೂ ದಿನಗಳಿಂದ ವಿಶೇಷ ಪೂಜೆ, ಹೋಮ - ಹವನ ಮತ್ತು ಗಣಪತಿ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಪೂಜಾ ಕಾರ್ಯಕ್ರಮದಲ್ಲಿ ಕೂಡಿಗೆ, ಕೂಡುಮಂಗಳೂರು, ಮದಲಾಪುರ, ಸೀಗೆಹೊಸೂರು, ಹುದುಗೂರು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ನೂರಾರು ಭಕ್ತಾದಿಗಳು ಭಾಗವಹಿಸಿದ್ದರು. ಈ ಸಂದರ್ಭ ಮಾರಿಯಮ್ಮ ದೇವಾಲಯ ಸಮಿತಿ ವತಿಯಿಂದ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಅನ್ನದಾನ ವಿತರಣಾ ಕಾರ್ಯಕ್ರಮ ನಡೆಯಿತು.
ದೇವಾಲಯ ಸಮಿತಿ ಅಧ್ಯಕ್ಷ ಅಣ್ಣಯ್ಯ, ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಚಿ ಚಂದನ್, ಸೇರಿದಂತೆ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.