ಶನಿವಾರಸಂತೆ, ಮೇ ೨೬: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಿದ್ದು, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾವಂತರಾಗಬೇಕು ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಉಪಾಧ್ಯಕ್ಷ ಶಂಭುಲಿAಗಪ್ಪ ಅಭಿಪ್ರಾಯಪಟ್ಟರು.
ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ಉಚಿತ ಪಠ್ಯಪುಸ್ತಕಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ಪರಮೇಶ್ ಹಾಗೂ ಕೊಡ್ಲಿಪೇಟೆ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸುರೇಶ್ ಮಾತನಾಡಿ, ಮಕ್ಕಳಿಗೆ ಹಿತವಚನ ನುಡಿದರು.
೮, ೯ ಮತ್ತು ೧೦ನೇ ತರಗತಿಯ ೧೦೦ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಮುಖ್ಯ ಶಿಕ್ಷಕ ಅಬ್ದುಲ್ ರಬ್, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.