ಬಿಪಿಸಿಎಲ್ ಖಾಸಗೀಕರಣ ಯೋಜನೆ ಕೈಬಿಟ್ಟ ಕೇಂದ್ರ
ನವದೆಹಲಿ, ಮೇ ೨೬: ಹೆಚ್ಚಿನ ಬಿಡ್ಡುದಾರರು ಭಾಗವಹಿಸಲು ಸಾಧ್ಯ ವಾಗದ ಕಾರಣ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ (ಬಿಪಿಸಿಎಲ್) ತಾನು ಹೊಂದಿರುವ ಸಂಪೂರ್ಣ ಶೇ. ೫೨.೯೮ ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊAಡಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಗಳಿಂದಾಗಿ ಪ್ರಸ್ತುತ ಖಾಸಗೀಕರಣ ಪ್ರಕ್ರಿಯೆಯಲ್ಲಿ ಹೆಚ್ಚಿನ ಬಿಡ್ಡುದಾರರು ಭಾಗವಹಿಸಲು ಸಾಧ್ಯವಾಗದ ಕಾರಣ ಬಿಪಿಸಿಎಲ್ನಲ್ಲಿ ತನ್ನ ಶೇ. ೫೨.೯೮ ರಷ್ಟು ಪಾಲನ್ನು ಮಾರಾಟ ಮಾಡುವ ಪ್ರಸ್ತಾಪ ಹಿಂಪಡೆಯಲಾಗಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ತಿಳಿಸಿದೆ.
ಸಚಿವಾಲಯ ಬಂದ್ಗೆ ಕರೆ
ಬೆಂಗಳೂರು, ಮೇ ೨೬: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ತಾ. ೨೭ ರಂದು (ಇಂದು) ಸಚಿವಾಲಯ ಬಂದ್ ಕರೆ ನೀಡಿದ್ದು, ಸಿಬ್ಬಂದಿಗಳ ಪ್ರತಿಭಟನೆ ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ನೌಕರರ ಸಂಘದವರು ಸಚಿವಾಲಯದ ಬಂದ್ ಕರೆ ನೀಡಿರುವುದು ಕಾನೂನು ಬಾಹಿರವಾಗಿರುತ್ತದೆ. ಈ ಕ್ರಮವನ್ನು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಸಿಬ್ಬಂದಿ ಕಚೇರಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು. ಒಂದು ವೇಳೆ ಸಚಿವಾಲಯದ ಸಿಬ್ಬಂದಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕಚೇರಿಗೆ ಗೈರು ಹಾಜರಾದಲ್ಲಿ ಅದನ್ನು ಲೆಕ್ಕಕ್ಕಿಲ್ಲದ ಅವಧಿ (ಆies-ಟಿoಟಿ) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಅಲ್ಲದೆ, ಕಚೇರಿಗೆ ಹಾಜರಾಗಲು ಇಚ್ಛೆಪಡುವ ಸಿಬ್ಬಂದಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮವಹಿಸಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೇಶ್ಯಾವಾಟಿಕೆ ಕಾನೂನುಬದ್ಧ - ಪೊಲೀಸರ ಮಧ್ಯಪ್ರವೇಶಕ್ಕೆ ನಿರ್ಬಂಧ
ನವದೆಹಲಿ, ಮೇ ೨೬: ಸುಪ್ರೀಂ ಕೋರ್ಟ್ ಲೈಂಗಿಕ ಕಾರ್ಯಕರ್ತೆಯರ ಪರವಾಗಿ ಮಹತ್ವದ ಆದೇಶ ನೀಡಿದ್ದು, ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ. ವೇಶ್ಯಾವಾಟಿಕೆಯು ಒಂದು ವೃತ್ತಿಯಾಗಿದೆ ಮತ್ತು ಲೈಂಗಿಕ ಕಾರ್ಯಕರ್ತೆಯರು ಕಾನೂನಿನಡಿಯಲ್ಲಿ ಘನತೆ ಮತ್ತು ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ಕಾಪಾಡಲು ಆರು ನಿರ್ದೇಶನಗಳನ್ನು ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ರಕ್ಷಣೆಗೆ ಸಮಾನವಾಗಿ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ಎಲ್ಲಾ ಪ್ರಕರಣಗಳಲ್ಲಿ ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆ ಆಧಾರದ ಮೇಲೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೆ ಪೊಲೀಸರು ಮಧ್ಯಪ್ರವೇಶಿಸುವುದು ಅಥವಾ ಯಾವುದೇ ಕ್ರಿಮಿನಲ್ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದೆ. ಅವರನ್ನು ವೃತ್ತಿಯ ಆಧಾರದ ಮೇಲೆ ಅಳೆಯುವುದರಿಂದ ಯಾವುದೇ ಲಾಭವಿಲ್ಲ. ಸಂವಿಧಾನದ ೨೧ನೇ ಪರಿಚ್ಛೇದದ ಅಡಿಯಲ್ಲಿ ಈ ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಗೌರವಯುತವಾಗಿ ಬದುಕುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸ್ವಯಂಪ್ರೇರಿತ ಲೈಂಗಿಕ ಕೆಲಸವು ಕಾನೂನುಬಾಹಿರವಲ್ಲ ಮತ್ತು ವೇಶ್ಯಾಗೃಹ ನಡೆಸುವುದು ಕಾನೂನು ಬಾಹಿರವಾಗಿರುವುದರಿಂದ ವೇಶ್ಯಾಗೃಹಗಳ ಮೇಲಿನ ದಾಳಿಯಲ್ಲಿ ಲೈಂಗಿಕ ಕಾರ್ಯಕರ್ತರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಅಥವಾ ಬಲಿಪಶು ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ-೭ ಮಂದಿಯ ಬಂಧನ
ರಾಮನಗರ, ಮೇ ೨೬: ಇತ್ತೀಚಿಗಷ್ಟೇ ಮುಕ್ತಾಯಗೊಂಡ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಆರಂಭಕ್ಕೂ ಮುನ್ನವೇ ವಾಟ್ಸಾಪ್ನಲ್ಲಿ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಶಾಲೆಯೊಂದರ ಪ್ರಿನ್ಸಿಪಾಲ್, ಪತ್ರಕರ್ತ ಹಾಗೂ ನಾಲ್ವರು ಶಿಕ್ಷಕರು ಸೇರಿದಂತೆ ಏಳು ಮಂದಿಯನ್ನು ಮಾಗಡಿ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಪರೀಕ್ಷೆ ಆರಂಭಕ್ಕೂ ಮುನ್ನವೇ ವಾಟ್ಸಾಪ್ ಮೂಲಕ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಕಳುಹಿಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಟ್ಟ ಖಾಸಗಿ ಶಾಲೆಯ ಶಿಕ್ಷಕರು ಸೇರಿದಂತೆ ಕೆಲವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಮಾರ್ಚ್ ಮತ್ತು ಏಪ್ರಿಲ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಕೂಡ ಬಂದಿದೆ. ಆದರೆ ಪರೀಕ್ಷೆಯಲ್ಲಿ ಬಾರಿ ಆಕ್ರಮ ನಡೆದಿರುವುದು ಇದೀಗ ಬೆಳಕಿಗೆ ಬಂದಿದೆ. ಪ್ರಕರಣ ಸಂಬAಧ ಪೊಲೀಸರು ಇದುವರೆಗೂ ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಎಂಬಾತ, ಏಪ್ರಿಲ್ ೧೧ರಂದು ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನ, ಕೆಂಪೇಗೌಡ ಪ್ರೌಢಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಇರುವ ಎಚ್ಎಮ್ ಮಾಗಡಿ ಟೌನ್ ಎಂಬ ವಾಟ್ಸಾಪ್ ಗ್ರೂಪ್ಗೆ ಹರಿಬಿಟ್ಟಿದ್ದ. ಈ ವಿಚಾರ ಗೊತ್ತಿದ್ದರು ಕೆಲವರು ಸುಮ್ಮನೇ ಇದ್ದರು.
ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ ಕರ್ನಾಟಕ
ಬೆಂಗಳೂರು, ಮೇ ೨೬: ಈ ವರ್ಷದ ಜನವರಿಯಿಂದ ೧೩೨ ಪ್ರತಿಶತ ಅಧಿಕ ಪೂರ್ವ ಮುಂಗಾರು ಮಳೆ ಮತ್ತು ಉತ್ತಮ ನೈಋತ್ಯ ಮಾನ್ಸೂನ್ ಮತ್ತು ಹೆಚ್ಚುವರಿ ಈಶಾನ್ಯ ಮಾನ್ಸೂನ್ ಬಿದ್ದಿರುವುದರಿಂದ ರಾಜ್ಯ ಜೂನ್ ೨೦೨೧ ರಿಂದ ಮೇ ೨೦೨೨ ಜಲ ವರ್ಷಕ್ಕೆ ತಮಿಳುನಾಡಿಗೆ ೧೦೦ ಟಿಎಂಸಿ ಅಡಿ ಹೆಚ್ಚುವರಿ ಕಾವೇರಿ ನೀರನ್ನು ಬಿಡುಗಡೆ ಮಾಡಿದೆ. ಕಾವೇರಿ ಜಲವಿವಾದಗಳ ನ್ಯಾಯಾಧಿಕರಣದ ಅಂತಿಮ ಆದೇಶದಂತೆ ಇಡೀ ಜಲ ವರ್ಷಕ್ಕೆ ಅಗತ್ಯವಿರುವ ೧೭೭.೨೫ ಟಿಎಂಸಿ ಅಡಿಯಷ್ಟು ರಾಜ್ಯವು ೨೭೭ ಟಿಎಂಸಿ ಅಡಿ ಬಿಡುಗಡೆ ಮಾಡಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್ಎನ್ಡಿಎಂಸಿ) ಮೂಲಗಳು ತಿಳಿಸಿವೆ.
೯ ಗಂಟೆಗಳ ಕಾಲ ಕಾರ್ತಿ ಚಿದಂಬರA ವಿಚಾರಣೆ
ನವದೆಹಲಿ, ಮೇ ೨೬: ೨೦೧೧ರಲ್ಲಿ ಪಿ. ಚಿದಂಬರA ಕೇಂದ್ರ ಗೃಹ ಸಚಿವರಾಗಿದ್ದಾಗ ೨೬೩ ಚೀನಾ ದೇಶದ ಪ್ರಜೆಗಳಿಗೆ ವೀಸಾ ನೀಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರA ಅವರನ್ನು ೯ ಗಂಟೆಗಳ ಕಾಲ ಸಿಬಿಐ ಗುರುವಾರ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ವಿಶೇಷ ಕೋರ್ಟ್ ಅನುಮತಿಯೊಂದಿಗೆ ಯುಕೆ ಮತ್ತು ಯುರೋಪ್ಗೆ ತೆರಳಿದ್ದ ಕಾರ್ತಿ ಚಿದಂಬರA ದೇಶಕ್ಕೆ ಆಗಮಿಸಿದ ೧೬ ಗಂಟೆಯೊಳಗೆ ಸಿಬಿಐ ವಿಚಾರಣೆಗೆ ಸಹಕರಿಸಬೇಕೆಂದು ವಿಶೇಷ ನ್ಯಾಯಾಲಯವೊಂದು ಆದೇಶ ಹೊರಡಿಸಿತ್ತು. ಬುಧವಾರ ವಿದೇಶದಿಂದ ಆಗಮಿಸಿದ ಕಾರ್ತಿ ಚಿದಂಬರA, ಇಂದು ಬೆಳಿಗ್ಗೆ ೮ ಗಂಟೆಯಿAದ ಸಂಜೆ ೬ ಗಂಟೆಯವರೆಗೂ ವಿಚಾರಣೆ ಎದುರಿಸಿದ್ದಾರೆ ಎಂದು ಅಧಿಕಾರಿ ಜೋಶಿ ತಿಳಿಸಿದ್ದಾರೆ. ಈ ಕಾರ್ತಿ ಚಿದಂಬರA ಅವರನ್ನು ಮೇ ೩೦ರವರೆಗೆ ಬಂಧಿಸದAತೆ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಮಧ್ಯಂತರ ರಕ್ಷಣೆಯನ್ನು ಒದಗಿಸಿದೆ. ಕಾರ್ತಿ ಚಿದಂಬರA ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಗುರುವಾರ ಮಧ್ಯಂತರ ರಕ್ಷಣೆಯ ಆದೇಶ ಹೊರಡಿಸಿದ್ದಾರೆ.
ಮತ್ತೆ ಶುರುವಾದ ಹಿಜಾಬ್ ವಿವಾದ
ಮಂಗಳೂರು, ಮೇ ೨೬: ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿ ನಿಯರು ತರಗತಿಗೆ ಹಾಜರಾಗುವ ಮುನ್ನ ಹಿಜಾಬ್ ತೆಗೆಯಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳು ತರಗತಿಯಿಂದ ಹೊರಬಂದು ಪ್ರತಿಭಟನೆ ನಡೆಸಿದರು. ಮುಸ್ಲಿಂ ವಿದ್ಯಾರ್ಥಿ ಗಳು ಹಿಜಾಬ್ ತೆಗೆಯುವವರೆಗೆ ಅಥವಾ ಹೊರಗೆ ಕಳುಹಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. ಸಮಸ್ಯೆ ಬಗೆಹರಿಯುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ಪ್ರತಿಭಟನಾನಿರತರು ಪಟ್ಟು ಹಿಡಿದಿದ್ದಾರೆ.