ಮಡಿಕೇರಿ, ಮೇ ೨೬: ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸö್ಯ ಸಂಪದಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

೨೦೨೨-೨೩ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ರೈತರಿಂದ ಅರ್ಜಿ ಸಲ್ಲಿಸಲು ಜೂನ್ ೧೫ ಕೊನೆಯ ದಿನವಾಗಿದೆ. ಜಿಲ್ಲೆಯ ರೈತರು ಈ ಅವಕಾಶವನ್ನು ಸದುಪ ಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮೀನು ಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ/ ಮೀನುಮರಿ ಉತ್ಪಾದನಾ ಕೇಂದ್ರ ಹಾರಂಗಿನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.