ಕುಶಾಲನಗರ, ಮೇ ೨೬: ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.

ಕುಶಾಲನಗರ ಕನ್ನಡ ಭಾರತಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಉದ್ಘಾಟಿಸಿದರು. ಕುಶಾಲನಗರದ ವ್ಯಾಪ್ತಿಯ ಪಿಯುಸಿ, ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಮೂವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಗ್ರಾಮೀಣ ಭಾಗದಲ್ಲಿ ಸಹಕಾರ ತತ್ವ, ವಿಷಯದ ಮೇಲೆ ಪ್ರಬಂಧ ನೀಡಲಾಗಿತ್ತು.

ಸಹಕಾರ ಸಂಘದ ಅಧ್ಯಕ್ಷ ಟಿ ಆರ್ ಶರವಣ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿ ಭಾರದ್ವಾಜ್ ಆನಂದತೀರ್ಥ, ಕಾಲೇಜು ಪ್ರಭಾರ ಪ್ರಾಂಶುಪಾಲರಾದ ರುದ್ರಪ್ಪ ಸಂಘದ ಉಪಾಧ್ಯಕ್ಷರಾದ ವಿ ಎಸ್ ಆನಂದಕುಮಾರ್, ನಿರ್ದೇಶಕರಾದ ಡಿ ವಿ ರಾಜೇಶ್, ಕವಿತಾ ಮೋಹನ್ ಇದ್ದರು.

ಸ್ಪರ್ಧೆಯ ಪಲಿತಾಂಶವನ್ನು ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಕಟಿಸಿ ಬಹುಮಾನ ನೀಡಲಾಗುವುದು ಎಂದು ಸಂಘದ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.