ನಾಪೋಕ್ಲು, ಮೇ ೨೬: ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ವಜ್ರಮಹೋತ್ಸವ ಸಮಾರಂಭ ತಾ. ೨೮ ಮತ್ತು ೨೯ರಂದು ಕೊಳಕೇರಿ ಸರ್ಕಾರಿ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಜರುಗಲಿದೆ.
ತಾ. ೨೮ ಬೆಳಿಗ್ಗೆ ೯.೩೦ ಕ್ಕೆ ನಡೆಯುವ ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಗ್ರಾಮದ ಗ್ರಾಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಕಲಿಯಂಡ ಡಾಲು ಕಾಳಪ್ಪ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನಗಾರ್ತಿ ಮತ್ತು ಲೇಖಕ ಮಾಳೇಟಿರ ಸೀತಮ್ಮ ವಿವೇಕ್ ಭಾಗವಹಿಸಲಿದ್ದಾರೆ.
ತಾ. ೨೯ ರಂದು ಬೆಳಿಗ್ಗೆ ೯.೩೦ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ. ಬೋಪಯ್ಯ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ವಜ್ರಮಹೋತ್ಸವದ ಸಭಾಂಗಣವನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಲಿರುವರು. ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ವಿಧಾನಪರಿಷತ್ ಸದಸ್ಯ ಶಾಂತೆಯAಡ ವೀಣಾ ಅಚ್ಚಯ್ಯ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಕೊಡಗು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಹೈಕೋರ್ಟ್ ವಕೀಲ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ , ಎಲೆಕ್ಟಿçಕಲ್ ಇಂಜಿನಿಯರ್ ತೀತಿರ ರೋಷನ್ ಅಪ್ಪಚ್ಚು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.