ಮಡಿಕೇರಿ, ಮೇ ೨೬: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಸಂಬAಧ ೨೦೨೨-೨೩ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ೪೦ ವರ್ಷ ವಯೋಮಿತಿ ಒಳಗಿರಬೇಕು. ಅಭ್ಯರ್ಥಿಯ ಮತ್ತು ಪೋಷಕರ ವಾರ್ಷಿಕ ಆದಾಯ ರೂ. ೨.೫೦ ಲಕ್ಷ ಮೀರಬಾರದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ ೩ ಅಥವಾ ೫ ವರ್ಷಗಳ ಅಥವಾ ಪಿಯುಸಿ ನಂತರ ೫ ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು.

ಅರ್ಜಿಯನ್ನು ಆನ್‌ಲೈನ್ ಮೂಲಕ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಮೇ ೩೧ ರಿಂದ ಜುಲೈ ೫ ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೦೮೨೭೬-೨೮೧೧೧೫ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ವೀರಾಜಪೇಟೆ ೦೮೨೭೪-೨೬೧೨೬೧ ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೆಗೌಡ ಅವರು ತಿಳಿಸಿದ್ದಾರೆ.