*ಸಿದ್ದಾಪುರ, ಮೇ ೨೮: ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ಹಳೆಯ ಕಟ್ಟಡಕ್ಕೆ ಕಾಯಕಲ್ಪ ನೀಡಲಾಗುತ್ತಿದೆ.
ಕಟ್ಟಡ ಶಿಥಿಲಾವಸ್ಥೆಗೊಂಡಿರುವುದರಿAದ ಸುಮಾರು ರೂ. ೧೫ ಲಕ್ಷ ವೆಚ್ಚದಲ್ಲಿ ದುರಸ್ತಿ ಮತ್ತು ಮೇಲ್ಛಾವಣಿ ಅಳವಡಿಕೆ ಕಾರ್ಯ ನಡೆಯುತ್ತಿದೆ. ಕಟ್ಟಡದಲ್ಲಿ ಅತಿಥಿಗೃಹದ ವ್ಯವಸ್ಥೆ ಮಾಡಲಾಗಿದ್ದು, ವಾಯುಪುತ್ರ ಭವನ ಎಂದು ಹೆಸರಿಡಲಾಗಿದೆ. ಇದಕ್ಕೆ ಪೂರಕವಾಗಿ ಕಟ್ಟಡದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಮೂರ್ತಿಯನ್ನು ನಿಲ್ಲಿಸಲಾಗುವುದು, ಮೂರ್ತಿ ಕೆತ್ತನೆ ಕಾರ್ಯ ನಡೆಯುತ್ತಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ.
ಲೈನ್‌ಮನೆಗಳಿಲ್ಲದ ಅಕ್ಕಪಕ್ಕದ ಕಾಫಿ ತೋಟಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಭವನದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಚೆಟ್ಟಳ್ಳಿ ಸಹಕಾರ ಸಂಘದ ಕಟ್ಟಡದಲ್ಲಿ ನರೇಂದ್ರ ಮೋದಿ ಭವನ ನಿರ್ಮಿಸಿ ಕಾವೇರಿ, ಪಶುಪತಿ, ಪುಣ್ಯಕೋಟಿ ದೇವರುಗಳ ಮೂರ್ತಿ ಪ್ರತಿಷ್ಠಾಪಿಸಿ ಮಣಿ ಉತ್ತಪ್ಪ ಗಮನ ಸೆಳೆದಿದ್ದರು.