ಮಡಿಕೇರಿ, ಮೇ ೨೭: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ೪ ವರ್ಷದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ತಾ. ೩೧ ರೊಳಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ವೀಕ್ಷಿಸಬಹುದು. ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ-೨ಎ ರಲ್ಲಿ ಬರುವ ಸವಿತಾ ಸಮಾಜ ಅಥವಾ ಅದರ ಉಪಜಾತಿಗಳಿಗೆ ಸೇರಿರಬೇಕು (ಕುಟುಂಬದ ವಾರ್ಷಿಕ ಆದಾಯ ಮಿತಿ-ರೂ. ೨ ಲಕ್ಷ), ವಯೋಮಿತಿ ಕನಿಷ್ಟ ೧೦ ವರ್ಷ ಹಾಗೂ ಗರಿಷ್ಠ ೧೫ ವರ್ಷಗಳು (ಒಂದು ವೇಳೆ ಅಧ್ಯಯನ ಮಾಡುತ್ತಿರುವ ೧೫ ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳು ದೊರೆಯದ ಪಕ್ಷದಲ್ಲಿ ಮಾತ್ರ ೧೮ ವರ್ಷದವರೆಗಿನ ಮಕ್ಕಳನ್ನು ಸ್ವಲ್ಪಮಟ್ಟಿಗೆ ಸೇರಿಸಲು ಅವಕಾಶ ನೀಡಲಾಗುವುದು).

ಉಚಿತ ಊಟ ಮತ್ತು ವಸತಿ ವ್ಯವಸ್ಥೆ/ ವಸತಿಯೇತರ ವಿದ್ಯಾರ್ಥಿಗಳಿಗೆ ಅವಕಾಶ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್‌ನ ಸ್ಥಳೀಯ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ಒದಗಿಸಲಾಗುವಂತೆ ಸಮವಸ್ತç, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಜಮಖಾನ/ಹಾಸಿಗೆ, ಹೊದಿಕೆ, ಕ್ಷೌರದ ವೆಚ್ಚ ಮತ್ತಿತರ ಒದಗಿಸಲಾಗುವುದು. ವಿದ್ಯಾರ್ಥಿಗೆ ಮಾಸಿಕ ತರಬೇತಿ ಭತ್ಯೆ ರೂ. ೫೦೦ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌAಡು ಹತ್ತಿರ, ಮಡಿಕೇರಿ ಈ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: ೦೮೨೭೨-೨೯೫೬೨೮ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ ಅವರು ತಿಳಿಸಿದ್ದಾರೆ.