ಮಡಿಕೇರಿ, ಮೇ ೨೭: ಎಸ್.ಎಸ್ ಆಸ್ಪತ್ರೆ ಮತ್ತು ಆಸ್ಪತ್ರೆಯ ಆರ್.ಕೆ ಲ್ಯಾಬೋರೇಟರಿಗಳ ಪ್ರಥಮ ವಾರ್ಷಿಕೋತ್ಸವ ಜೂನ್ ೪ ರಂದು ನಡೆಯಲಿದ್ದು, ಮಡಿಕೇರಿ ಮಹದೇವಪೇಟೆ ಮುಖ್ಯ ರಸ್ತೆಯಲ್ಲಿರುವ ಎಸ್.ಎಸ್ ಆಸ್ಪತ್ರೆಯ ಆವರಣದಲ್ಲಿ (ಎ.ಎಲ್.ಜಿ ಕ್ರೆಸೆಂಟ್ ಶಾಲೆ ಸಮೀಪ) ಕೊಡಗು ಜಿಲ್ಲೆಯ ಪತ್ರಕರ್ತರು ಹಾಗೂ ಅವರುಗಳ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆ, ಈ.ಸಿ.ಜಿ, ರಕ್ತದ ಗುಂಪಿನ ದೃಢೀಕರಣ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುತ್ತದೆ. ಇದರೊಂದಿಗೆ ವೈದ್ಯರೊಡನೆ ಉಚಿತ ಸಮಾಲೋಚನೆ ಕೂಡ ಏರ್ಪಡಿಸಲಾಗಿದೆ. ಇದರ ಸದುಪಯೋಗವನ್ನು ಕೊಡಗು ಜಿಲ್ಲೆಯ ಮಾಧ್ಯಮ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪತ್ರಕರ್ತರು ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾಕ್ಟರ್ ಶಿಲ್ಪಾ ಸತೀಶ್ ಅವರು ತಿಳಿಸಿದ್ದಾರೆ.

ಆರೋಗ್ಯ ಶಿಬಿರ ಜೂನ್ ೪ ರಂದು ಬೆಳಿಗ್ಗೆ ೮:೩೦ ರಿಂದ ಮಧ್ಯಾಹ್ನ ೧:೩೦ ರವರೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಮಾಜಿ ನಗರಸಭಾ ಅಧ್ಯಕ್ಷ ಹೆಚ್.ಎಂ ನಂದಕುಮಾರ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಭಾಗವಹಿಸಲಿದ್ದಾರೆ.