ಚೆಯ್ಯಂಡಾಣೆ, ಮೇ ೨೭: ನರಿಯಂದಡ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಕರಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ಡಿಜಿಟಲ್ ಗ್ರಂಥಾಲಯ ಹಾಗೂ ಕೋಕೇರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮ ತಾ. ೩೦ ರಂದು ೧೧ ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಸುಜಾ ಕುಶಾಲಪ್ಪ, ಪಶ್ಚಿಮಘಟ್ಟ ಅರಣ್ಯ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಉಪಕಾರ್ಯದರ್ಶಿ ಪಿ. ಲಕ್ಷಿö್ಮ ಚಂದ್ರಶೇಖರ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ನರಿಯಂದಡ ಗ್ರಾಮ ಪಂಚಾಯಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.