ಮಡಿಕೇರಿ, ಮೇ ೨೭: ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಮತ್ತು ದಲಿತ ಜಾಗೃತಿ ಸಮಾವೇಶವನ್ನು ಮೇ ೨೯ ರಂದು ಮಡಿಕೇರಿಯಲ್ಲಿ ನಡೆಯಲಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಮ್ಮ ಅಧ್ಯಕ್ಷತೆಯಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬೆಳಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದರು.

ಮುಖ್ಯ ಭಾಷಣಕಾರರಾಗಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಪತ್ರಕರ್ತ ರಾ.ಚಿಂತನ್, ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿ, ಮೈಸೂರು- ಕೊಡಗು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮೈಸೂರು ಜಿಲ್ಲಾ ಸಂಚಾಲಕ ಮಹದೇವಸ್ವಾಮಿ, ಕಾಂಗ್ರೆಸ್ ಯುವ ಮುಖಂಡ ಡಾ.ಮಂಥರ್ ಗೌಡ, ಜಿ.ಪಂ ಉಪಕಾರ್ಯದರ್ಶಿ ಲಕ್ಷಿö್ಮà ಚಂದ್ರಶೇಖರ್, ನಗರಸಭಾ ಪೌರಾಯುಕ್ತ ಹೆಚ್.ವಿ.ರಾಮದಾಸ್, ಸ್ತಿçÃರೋಗ ತಜ್ಞೆ ಸೌಮ್ಯ ಡಿ., ಸೇರಿದಂತೆ ಜಿಲ್ಲಾ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಮಧ್ಯಾಹ್ನ ರಥದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನಿರಿಸಿ ಕಾವೇರಿ ಕಲಾಕ್ಷೇತ್ರದಿಂದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಭವನದವರೆಗೆ ಜಾಗೃತಿ ಜಾಥಾ ನಡೆಯಲಿದ್ದು, ಕಲಾತಂಡಗಳು ಆಕರ್ಷಿಸಲಿವೆ ಎಂದು ಹೇಳಿದ್ದಾರೆ.