ಮಡಿಕೇರಿ, ಮೇ ೨೭: ಇಲ್ಲಿಗೆ ಸಮೀಪದ ಕೋಪಟ್ಟಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ಬಾರಿ ಕೂಡ ಊರಿನ ಹಿರಿಯರಾದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಅವರು ನೋಟ್ ಪುಸ್ತಕ ಹಾಗೂ ಲೇಖನಿ ಸಾಮಗ್ರಿಗಳನ್ನು ಉದಾರವಾಗಿ ನೀಡಿದ್ದಾರೆ.
ಇತ್ತೀಚೆಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪರವಂಡ ಪ್ರದೀಪ್ ಮತ್ತು ಸದಸ್ಯರು ಉಪಸ್ಥಿತರಿದ್ದರು. ಸೋಮಣ್ಣ ಅವರು ಕಳೆದ ೧೩ ವರ್ಷಗಳಿಂದ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಲೇಖನಿ ಸಾಮಗ್ರಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಗಣ್ಯರು ಶ್ಲಾಘಿಸಿದರು. ಮುಖ್ಯ ಶಿಕ್ಷಕಿ ಬಿ.ಎನ್. ಜಯಂತಿ ಸ್ವಾಗತಿಸಿ, ಶಿಕ್ಷಕಿ ಯು.ಪಿ. ಸರೋಜ ವಂದಿಸಿದರು.