ಚೆಯ್ಯಂಡಾಣೆ, ಮೇ ೩೦: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಕರಡ ಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಿಸಿದ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮತ್ತು ಕೋಕೇರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಚೆಯ್ಯಂಡಾಣೆಯ ಲಕ್ಷಿö್ಮ ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ವಹಿಸಿದ್ದರು. ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ತ್ವರಿತವಾಗಿ ಚೆಯ್ಯಂಡಾಣೆ ಪಾರಾಣೆ ರಸ್ತೆಯನ್ನು ಹಾಗೂ ಕೋಕೇರಿ ಕೊಳಕೇರಿ ರಸ್ತೆಯನ್ನು ದುರಸ್ಥಿಪಡಿಸಲಾಗುವುದೆಂದರು.
ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಮಾತನಾಡಿದರು. ಈ ಸಂದರ್ಭ ೩೫ ವರ್ಷಗಳ ಕಾಲ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದಿದ ಕಡಂಗದ ಹಸೈನಾರ್ ಕೆ.ಜಿ. ಹಾಗೂ ಗ್ರಂಥಾಲಯ ಕಟ್ಟಡವನ್ನು ನಿರ್ಮಿಸಿದ ಗುತ್ತಿಗೆದಾರ ಕೋಡಿರ ವಿವೇಕ್ ಕುಶಾಲಪ್ಪ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಅಧಿಕಾರಿ ಶೇಖರ್, ಗ್ರಾಮ ಪಂಚಾಯಿತಿಯ ಸದಸ್ಯರು ಸಿಬ್ಬಂದಿ, ಗ್ರಾಮಸ್ಥರು ಹಾಜರಿದ್ದರು. ಕೋಡಿರ ವಿನೋದ್ ನಾಣಯ್ಯ ಸ್ವಾಗತಿಸಿ, ವಂದಿಸಿದರು.