ಮಡಿಕೇರಿ, ಮೇ. ೩೦: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೋನಿಕ್ಸ್ ಸಂಸ್ಥೆ ಇವರ ಸಹಯೋಗದೊಂದಿಗೆ ೨೦೨೧-೨೨ನೇ ಸಾಲಿಗೆ ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ ‘ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್’ ತರಬೇತಿ ಕಾರ್ಯಕ್ರಮಕ್ಕೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಟೈಲರಿಂಗ್ ತರಬೇತಿಯನ್ನು ಬೆಂಗಳೂರು ಕೇಂದ್ರದಲ್ಲಿ ಪಡೆಯಲು ಫಲಾಪೇಕ್ಷಿಯ ವಯೋಮಿತಿ ೧೮ ರಿಂದ ೪೫ ವರ್ಷಗಳು, ಫಲಾಪೇಕ್ಷಿಯ ವಿದ್ಯಾರ್ಹತೆ ಕನಿಷ್ಟ ೫ನೇ ತರಗತಿ ಉತ್ತೀರ್ಣರಾಗಿರಬೇಕು. ಫಲಾಪೇಕ್ಷಿಯ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. ೧,೫೦,೦೦೦ ಹಾಗೂ ನಗರ ಪ್ರದೇಶವಾದಲ್ಲಿ ರೂ. ೨ ಲಕ್ಷ ಮಿತಿಯೊಳಗಿರಬೇಕು. ಫಲಾಪೇಕ್ಷಿಯ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಫಲಾಪೇಕ್ಷಿಯ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರಬಾರದು. ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಸೌಲಭ್ಯ ಕಲ್ಪಿಸಲಾಗುವುದು.
ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿಯನ್ನು ದಾವಣಗೆರೆ ಮತ್ತು ಧಾರವಾಡ ಕೇಂದ್ರದಲ್ಲಿ ಪಡೆಯಲು ಫಲಾಪೇಕ್ಷಿಯ ವಯೋಮಿತಿ ೧೮ ರಿಂದ ೪೦ ವರ್ಷಗಳು, ವಿದ್ಯಾರ್ಹತೆ ಕನಿಷ್ಟ ೧೦ನೇ ತರಗತಿ ಉತ್ತೀರ್ಣರಾಗಿಬೇಕು. ಫಲಾಪೇಕ್ಷಿಯ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. ೧,೫೦,೦೦೦ ಹಾಗೂ ನಗರ ಪ್ರದೇಶವಾದಲ್ಲಿ ರೂ. ೨ ಲಕ್ಷ ಮಿತಿಯೊಳಗಿರಬೇಕು. ಫಲಾಪೇಕ್ಷಿಯ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಫಲಾಪೇಕ್ಷಿಯ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರಬಾರದು. ಜಿಲ್ಲೆಯಲ್ಲಿ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಸೌಲಭ್ಯ ಕಲ್ಪಿಸಲಾಗುವುದು.
ಫಲಾಪೇಕ್ಷಿಯು ಅರ್ಜಿಯೊಂದಿಗೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‌ಬುಕ್‌ನ ಮೊದಲ ಪುಟದ ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಡಿಕೇರಿ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದು. ದೂ. ೦೮೨೭೨-೨೨೮೮೫೭ನ್ನು ಸಂಪರ್ಕಿಸಬಹುದು ಎಂದು ಕ.ಮ.ವಾ.ಪ.ಪಂ.ಅನಿನಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.